spot_img
Wednesday, April 29, 2026
spot_img

ಸಹಕಾರಿ ವ್ಯವಸ್ಥೆಗೆ ಧ್ವನಿಯಾಗುವೆ- ಶಾಸಕ ಯಶ್‌ಪಾಲ್ ಎ ಸುವರ್ಣ


ಉಡುಪಿ: ಸ್ವತಃ ಸಹಕಾರಿ ರಂಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ತಾನು, ವಿಧಾನ ಮಂಡಲದಲ್ಲಿ ಸಹಕಾರಿ ಧ್ವನಿಯಾಗುವೆ ಎಂದು ಉಡುಪಿ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿರುವ ಶಾಸಕರನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಹಕಾರಿಗಳನ್ನು ಪರಿಗಣಿಸಬೇಕು ಎಂದು ಹಿಂದಿನಿಂದಲೂ ಪ್ರತಿಪಾದಿಸಿದ್ದ ನನಗೆ ಶಾಸಕನಾಗುವ ಅವಕಾಶ ಲಭಿಸಿದೆ. ಉಡುಪಿಯಲ್ಲಿ ಸಹಕಾರ ಸೌಧ ನಿರ್ಮಾಣ ಹಾಗೂ ಸಹಕಾರಿ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿರುವ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಕೇಂದ್ರ ಸಹಕಾರ ಸಂಘದ ನಿರ್ದೇಶಕ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಹೆಚ್.ಎನ್, ಆಡಳಿತ ಮಂಡಳಿ ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಎಚ್. ಗಂಗಾಧರ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಬೆಳ್ಳಂಪಳ್ಳಿ., ಕೆ.ಕೊರಗ ಪೂಜಾರಿ, ಹರೀಶ್ ಶೆಟ್ಟಿ, ಕೆ. ಸುರೇಶ್‌ರಾವ್, ಮನೋಜ್‌ಎಸ್. ಕರ್ಕೇರ, ಗೋಪಿಕೃಷ್ಣ ರಾವ್, ಅನಿಲ್ ಎಸ್ ಪೂಜಾರಿ ಸಹಕಾರಿಗಳಾದ ಸುಧೀರ್ ಕುಮಾರ್, ಶಿವಾಜಿ ಎಸ್ ಸುವರ್ಣ, ನಾರಾಯಣ ಬಲ್ಲಾಳ್, ಸತೀಶ್ ಶೆಟ್ಟಿ ಕೆಮ್ಮಣ್ಣು, ಮೂಡಬಿದರೆ ಸಹಕಾರಿ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ವಿಶ್ವೇಶ್ವರಯ್ಯ ಉಪಸ್ಥಿತರಿದ್ದರು.

ಯೂನಿಯನ್ ನಿರ್ದೇಶಕರಾದ ಶ್ರೀಧರ ಪಿ.ಎಸ್ ಸ್ವಾಗತಿಸಿ ನಿರೂಪಿಸಿದರು. ಸಿ‌ಇ‌ಓ ಹರೀಶ್ ಬಿ.ಬಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!