spot_img
Sunday, June 14, 2026
spot_img

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ವಾರ್ಷಿಕ ಸಂಚಿಕೆ ಬಿಡುಗಡೆ

ಕುಂದಾಪುರ: “ಬದುಕಿನಲ್ಲಿ ಬರವಣಿಗೆಯಷ್ಟು ಖುಷಿ ಕೊಡುವ ಮತ್ತೊಂದು ದೊರಕದು. ನೋವು ಗಳನ್ನು ನಲಿವಾಗಿಸುವ ಶಕ್ತಿ ಸಾಹಿತ್ಯಕ್ಕಿದೆ. ಸೂಕ್ಷ್ಮ ಸಂವೇದನೆಯಲ್ಲಿ ಹುಟ್ಟಿಕೊಂಡ ಬರವಣಿಗೆ ಹೆಚ್ಚು ಪ್ರಬಲವಾಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಬರವಣಿಗೆಯ ಹವ್ಯಾಸಗಳನ್ನು ಬೆಳೆಸಿಕೊಂಡರೆ ಮುಂದೆ ಆ ವಿದ್ಯಾ ಸಂಸ್ಥೆ ನಿಮ್ಮ ಬಗೆಗೆ ಹೆಮ್ಮೆ ಪಡುವಂತಾಗುತ್ತದೆ” ಎಂದು ಖ್ಯಾತ ಕತೆಗಾರರು, ಲಲಿತ ಪ್ರಬಂಧ ಬರಹಗಾರರು ಆಗಿರುವ ಸವಿತಾ ಮಾಧವ ಶಾಸ್ತ್ರಿ ಗುಂಡ್ಮಿ ಹೇಳಿದರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ದೃಷ್ಟಿ ವಾರ್ಷಿಕ ಸಂಚಿಕೆ ಅನಾವರಣ ಮಾಡಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಕವಿತ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು.

ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷರಾದ ಡಾ ಕಾಶೀನಾಥ್ ಪೈ, ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್., ಸಂಪಾದಕ ಬಳಗದ ಥಾಮಸ್ ಪಿ.ಏ., ನಾರಾಯಣ ಇ ನಾಯ್ಕ್ ಉಪಸ್ಥಿತರಿದ್ದರು.

ಕಾರ್ಯ ನಿರ್ವಾಹಕ ಸಂಪಾದಕರಾದ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಅನನ್ಯ ಪ್ರಾರ್ಥನೆ ಮಾಡಿದರು. ನೇಹ ಸ್ವಾಗತಿಸಿ, ಶ್ರೇಯ ವಂದಿಸಿದರು. ವಸುಧಾ ಪರಿಚಯಿಸಿ, ನಿಶಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!