spot_img
Monday, April 27, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ‘ಭಾರತೀಯ ಸಂವಿಧಾನ’ ಪುಸ್ತಕ ಬಿಡುಗಡೆ

     ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಉಡುಪಿಯ ಎಮ್.ಜಿ.ಎಮ್. ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ಫೂರ್ತಿ ಎಸ್. ಫೆರ್ನಾಂಡಿಸ್‌ರವರು ರಚಿಸಿದ ಭಾರತೀಯ ಸಂವಿಧಾನ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಮ್.ಜಿ.ಎಮ್. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಸುರೇಂದ್ರನಾಥ ಶೆಟ್ಟಿ ಬಿಡುಗಡೆಗೊಳಿಸಿದರು.
ಈ ಪುಸ್ತಕವನ್ನು ನೂತನ ರಾಷ್ಟ್ರೀಯ ಶಿಕ್ಷಣಾ ನೀತಿಯ ಅನ್ವಯ ಮಂಗಳೂರು ವಿ.ವಿ. ರೂಪಿಸಿದ ಪಠ್ಯಕ್ರಮಕ್ಕೆ ಅನುಗುಣವಾಗಿ ಮೂರನೇ ಅಥವಾ ನಾಲ್ಕನೇಯ ಸೆಮಿಸ್ಟರ್ ಕಡ್ಡಾಯ ಪತ್ರಿಕೆ  'ಭಾರತೀಯ ಸಂವಿಧಾನ'ದ ಕುರಿತಾಗಿ ರಚಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ಶ್ರೀಮತಿ ಪ್ರೀತಿ ಹೆಗ್ಡೆ, ವಿದ್ಯಾರ್ಥಿ ಪ್ರತಿನಿಧಿ ವಿಘ್ನೇಶ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಅವಿತಾ ಕೊರೆಯಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!