spot_img
Monday, April 27, 2026
spot_img

ಶ್ರೀ ವೆಂಕಟರಮಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್‍ಯಾಂಕ್ ವಿಜೇತರಿಗೆ ಸನ್ಮಾನ


ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್‍ಯಾಂಕ್‌ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿಜ್ಞಾನ ವಿಭಾಗದಲ್ಲಿ ನೇಹಾ.ಜೆ.ರಾವ್ 3ನೇ ರ್‍ಯಾಂಕ್, ಸೃಜನ್ ಭಟ್ 6ನೇ ರ್‍ಯಾಂಕ್, ಪ್ರಣಮ್ಯ 7ನೇ ರ್‍ಯಾಂಕ್, ಪ್ರಜ್ಞಾ ಶೆಟ್ಟಿ , ನಿತೇಶ್, ಇಂಚರ 8ನೇ ರ್‍ಯಾಂಕ್, ಮಯೂರ್ ಶೆಟ್ಟಿ 9ನೇ ರ್‍ಯಾಂಕ್, ಉಜ್ವಲ ಶೇಟ್, ಸಂಜನಾ ಶೆಟ್ಟಿ 10ನೇ ರ್‍ಯಾಂಕ್, ವಾಣಿಜ್ಯ ವಿಭಾಗದಲ್ಲಿ ನೇಹಾ ಎಸ್. ರಾವ್ 5ನೇ ರ್‍ಯಾಂಕ್, ಲಿಪಿಕಾ. ಕೆ 6ನೇ ರ್‍ಯಾಂಕ್ , ಎಸ್ ವೈಷ್ಣವಿ, ಸಮೃದ್ಧಿ ಪೈ 10 ನೇ ರ್‍ಯಾಂಕ್ ದಾಖಲಿಸಿದ 13 ವಿದ್ಯಾರ್ಥಿಗಳಿಗೆ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ, ಪುಷ್ಪ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾದ 218 ವಿದ್ಯಾರ್ಥಿಗಳಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ. ಎಂ ಗೊಂಡ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ವಿಪುಲ ಅವಕಾಶ ಇದೆ ಅದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ , ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿಂದಿ ಉಪನ್ಯಾಸಕಿ ಸುಕಿತಾ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ವಂದಿಸಿ, ಇಂಗ್ಲೀಷ್ ಉಪನ್ಯಾಸಕ ಅಶೋಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!