spot_img
Monday, April 27, 2026
spot_img

ಅತ್ಯುತ್ತಮ ನಾಯಕತ್ವಕ್ಕಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ಅಂತರಾಷ್ಟ್ರೀಯ ಸಾಧಕ ಪ್ರಶಸ್ತಿ-2023’


ಮಂಗಳೂರು: ಇಂಟರ್ ನ್ಯಾಶನಲ್ ಅಚಿವರ್ಸ್ ಕಾನ್ಫರೆನ್ಸ್ (ಐ‌ಎಸಿ) ಅತ್ಯುತ್ತಮ ಸಾಂಸ್ಥಿಕ ನಾಯಕತ್ವದ ಆಧಾರದಲ್ಲಿ ನೀಡುವ “ಅಂತಾರಾಷ್ಟ್ರೀಯ ಸಾಧಕ ಪ್ರಶಸ್ತಿ -2023 ” ವೈಯಕ್ತಿಕ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.

ಐ‌ಎಸಿ ಒಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಇದು ರಾಷ್ಟ್ರೀಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತಿದೆ. ಕಳೆದ 15 ವರ್ಷಗಳಿಂದ ಭಾರತ ಮತ್ತು ವಿದೇಶಗಳಲ್ಲಿ ಸರ್ಕಾರದ ಸಹಯೋಗದೊಂದಿಗೆ ಸೆಮಿನಾರ್ ಮತ್ತು ಸಮಾವೇಶಗಳನ್ನು ನಡೆಸುತ್ತಿದ್ದು , ಈ ಬಾರಿ ವಿವಿಧ ದೇಶಗಳ ಪ್ರಸಿದ್ಧ ಬಿಸಿನೆಸ್ ರಾಯಭಾರಿಗಳು , ಹೈ ಕಮಿಷನರ್ ಗಳು ಹಾಗೂ ಗಣ್ಯಾತಿ ಗಣ್ಯರ ಭಾಗವಹಿಸುವಿಕೆಯಲ್ಲಿ ಜೂನ್ -24ರಂದು ದುಬೈಯಲ್ಲಿ ” ನವಭಾರತ-ಆತ್ಮನಿರ್ಭರ ಭಾರತ್ “ಎಂಬ ವಿಷಯದ ಕುರಿತು ಇಂಟರ್ ನ್ಯಾಶನಲ್ ಬಿಸಿನೆಸ್ ಸೆಮಿನಾರ್ ನಡೆಯಲಿದ್ದು ಈ ಶೃಂಗಸಭೆಯಲ್ಲಿ ಅತ್ಯುತ್ತಮ ನಾಯಕತ್ವಕ್ಕಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪ್ರತಿಷ್ಠಿತ ’ಅಂತಾರಾಷ್ಟ್ರೀಯ ಸಾಧಕ ಪ್ರಶಸ್ತಿ’ ಯನ್ನು ಸ್ವೀಕರಿಸಲಿರುವರು .

ಜನ ಸಾಮಾನ್ಯರ ಸೇವೆಯಲ್ಲಿ : ಡಾ.ಎಂ.ಎನ್ . ರಾಜೇಂದ್ರ ಕುಮಾರ್ ಸಾರಥ್ಯದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ , ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ ರಾಜ್ಯ , ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಜನಸಾಮಾನ್ಯರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಎಸ್ ಸಿಡಿಸಿಸಿ ಬ್ಯಾಂಕ್ ರಾಜೇಂದ್ರ ಕುಮಾರ್ ಅವರ ಕಾರ್ಯ ವೈಖರಿಯಿಂದಲೇ ’ಜನಸ್ನೇಹಿ’ ಬ್ಯಾಂಕ್ ಎನಿಸಿಕೊಂಡಿದೆ.

ಭಾರತ ಸರ್ಕಾರದ ಬಹು ಮಹಾತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಜ್ಯಾರಿಗೆ ತರುವಲ್ಲೂ ಎಸ್ ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿ ಗುರುತಿಸುವಲ್ಲೂ ರಾಜೇಂದ್ರ ಕುಮಾರ್ ಅವರ ಕಾರ್ಯ ಸಾಧನೆ ಮೇಲೈಸಿದೆ . ಈ ಯೋಜನೆಯಲ್ಲಿ ದಾಖಲೆ ಪ್ರಮಾಣದಲ್ಲಿ ಚಂದಾದಾರರನ್ನು ನೊಂದಾಯಿಸಿದ ಎಸ್ ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಎರಡು ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಪ್ರಶಸ್ತಿಗೆ ಪಾತ್ರವಾಗಿದೆ.

ಅಪೂರ್ವ ಪರಂಪರೆ : ರಾಜ್ಯದ ಧೀಮಂತ ಸಹಕಾರಿ ನಾಯಕರಾಗಿ , ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿರುವ ರಾಜೇಂದ್ರ ಕುಮಾರ್ ಸಹಕಾರ, ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ . ಇವರು ಈಚೆಗೆ ನ್ಯಾಶನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇದರ ವತಿಯಿಂದ ನೀಡಿದ ಪ್ರತಿಷ್ಠಿತ ’ಮದರ್ ತೆರೇಸಾ ಮೆಮೊರಿಯಲ್ ನ್ಯಾಶನಲ್ ಅವಾರ್ಡ ’ ಸ್ವೀಕರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!