spot_img
Monday, April 27, 2026
spot_img

ಶೂನ್ಯ ಶಿಕ್ಷಕರಿರುವ ಸರಕಾರಿ ಶಾಲೆಗಳಿಗೆ ತಕ್ಷಣ ಖಾಯಂ ಶಿಕ್ಷಕರನ್ನು ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ


ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ 63 ಸರಕಾರಿ ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದು, ರಾಜ್ಯದಲ್ಲಿಯೂ ಕೂಡಾ ಹಲವಾರು ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಸಮಸ್ಯೆಯಿದೆ. ಖಾಯಂ ಶಿಕ್ಷಕರಿಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಇದೇ ತಿಂಗಳು ನಡೆಯುವ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸಮಯದಲ್ಲಿ ಮೊದಲು ಶೂನ್ಯ ಶಿಕ್ಷಕರು ಇರುವ ಶಾಲೆಗಳನ್ನು ಭರ್ತಿಗೊಳಿಸಿ ನಂತರ ಉಳಿದ ಶಾಲೆಗಳಿಗೆ ಅವಕಾಶ ನೀಡಬೇಕು. ಶಿಕ್ಷಕರಿಲ್ಲದ ಶಾಲೆಗೆ ಪ್ರಥಮ ಒತ್ತನ್ನು ನೀಡುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ಘಟಕ ಮನವಿ ಸಲ್ಲಿಸಿದೆ.

ಸೋಮವಾರ ಕುಂದಾಪುರದ ಸಹಾಯಕ ಕಮಿಷನರ್ ಕಛೇರಿಯಲ್ಲಿ ನಾಗರಾಜ ನಾಯ್ಕಡ ತಹಶೀಲ್ದಾರ್ ಗ್ರೇಡ್-೨ ಇವರ ಮೂಲಕ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ಶಿಕ್ಷಣ ತಜ್ಞರಾದ ಪ್ರೋ. ಡಾ. ನಿರಂಜನಾರಾಧ್ಯ ವಿ.ಪಿ ಅವರ ಮಾರ್ಗದರ್ಶನದಲ್ಲಿ ಹಾಗೂ ಮಗು ಮತ್ತು ಕಾನೂನು ಕೇಂದ್ರ ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನವರ್ಸಿಟಿ ಬೆಂಗಳೂರು ಇವರ ಸುಗಮವಾರಿಕೆಯಲ್ಲಿ ಉಡುಪಿ ಜಿಲ್ಲಾ ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ 2013ರಿಂದ ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಯಾಗಲಿ ಎಂಬ ಧ್ಯೇಯ ಉದ್ದೇಶದೊಂದಿಗೆ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸಬಲೀಕರಣ ಮತ್ತು ಶಿಕ್ಷಕರು, ಪೋಷಕರು ಮತ್ತು ಸಮುದಾಯದೊಂದಿಗೆ ನಿರಂತರವಾಗಿ ಗ್ರಾಮೀಣ ಭಾಗದ ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವಲ್ಲಿ ತೊಡಗಿಸಿಕೊಂಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಪುರಸಭಾ ಘಟಕದ ಅಧ್ಯಕ್ಷ ಅಶ್ವತ್ ಕುಂದಾಪುರ, ಬೈಂದೂರು ತಾಲೂಕು ಅಧ್ಯಕ್ಷ ಅವಿನಾಶ್ ಹೊಳ್ಳ, ಪತ್ರಿಕಾ ಕಾರ್ಯದರ್ಶಿ ಶಶಿ ಬಳ್ಕೂರು, ಸಂಘಟನಾ ಕಾರ್ಯದರ್ಶಿ ವರದ ಆಚಾರ್ಯ ಅಂಕದಕಟ್ಟೆ, ಸಂಪನ್ಮೂಲ ವ್ಯಕ್ತಿ ಅಶ್ಫಕ್ ಮೂಡುಗೋಪಾಡಿ, ಶೋಭಾ ಶಾಂತಾರಾಜ್, ತಾಲೂಕು ಕೋಶಾಧಿಕಾರಿ ಕೃಷ್ಣಾನಂದ ಶ್ಯಾನುಭಾಗ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು.

“ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಕರ್ನಾಟಕ ರಾಜ್ಯದ 35 ಶೈಕ್ಷಣಿಕ ಜಿಲ್ಲೆಯ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಇರುವ ಎಸ್.ಡಿ‌ಎಂಸಿ ಸದಸ್ಯರನ್ನು ಒಗ್ಗೂಡಿಸಿಕೊಂಡು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಹಕ್ಕಿಗಾಗಿ ಜನಾಂದೋಲನವಾಗಿ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ಸರಕಾರಕ್ಕೆ ಈ ಹಿಂದೆಯೇ ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಪ್ರಥಮ ಆದ್ಯತೆಯಲ್ಲಿ ಶಿಕ್ಷಕರನ್ನು ನೇಮಕ ಮಾಡುವಂತೆ ಮನವಿಯನ್ನು ನೀಡಿದ್ದೇವೆ, ಆದರೆ ಆ ಸಂದರ್ಭದಲ್ಲಿ ಸರಕಾರ ಸಮನ್ವಯ ವೇದಿಕೆಯ ಮನವಿಗೆ ಸ್ಪಂದಿಸಿ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡದೆ ಇದ್ದರೂ ಕೂಡ ತಕ್ಷಣಕ್ಕೆ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿತ್ತು, ಆದರೆ ಮತ್ತೊಮ್ಮೆ ದಿನಾಂಕ ೨೦ ರಂದು ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿರುವುದು ನಮ್ಮ ಗಮನಕ್ಕೆ ಬಂದಿದೆ, ಈ ಹಿಂದೆ ತಿಳಿಸಿರುವಂತೆ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಶಿಕ್ಷಕರನ್ನು ಒದಗಿಸಿ ಸರಕಾರ ಮತ್ತು ಇಲಾಖೆಯು ಶಿಕ್ಷಣದ ಬಗ್ಗೆ ಬದ್ಧತೆ ಮೆರೆಯಲಿ, ಒಂದು ವೇಳೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿಯೂ ಕೂಡ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಶಿಕ್ಷಕರನ್ನು ಒದಗಿಸದೆ ಆ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ನ್ಯಾಯ ದೊರಕಿಸಿಕೊಡದೆ ಇದ್ದಲ್ಲಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯು ಜಿಲ್ಲೆಯಾದ್ಯಂತ ಪ್ರತಿ ತಾಲೂಕು ಕೇಂದ್ರಗಳಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದೆ.
-ಅಬ್ದುಲ್ ಸಲಾಂ ಚಿತ್ತೂರು, ಅಧ್ಯಕ್ಷರು, ರಾಜ್ಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!