Sunday, September 8, 2024

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು-ವಿಕಾಸ್ ಹೆಗ್ಡೆ


ಕುಂದಾಪುರ: ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಉಳಿವಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇವತ್ತು ಪೇಟೆ ಪಟ್ಟಣ ಪ್ರದೇಶದ ಸರ್ಕಾರಿ ಶಾಲೆಗಳು ಸೂಕ್ತ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಪ್ರೋತ್ಸಾಹದಿಂದ ಇವತ್ತು ಮೂಲಭೂತ ಸೌಕರ್ಯ, ಕಂಪ್ಯೂಟರ್, ಅಗತ್ಯ ಶಿಕ್ಷಕರು, ವಾಹನ ವ್ಯವಸ್ಥೆಯನ್ನು ಹೊಂದುತ್ತಿವೆ ಇದು ಉತ್ತಮ ಬೆಳವಣಿಗೆ ಆದರೆ ಇವತ್ತು ಇಂತಹ ವ್ಯವಸ್ಥೆಗಳು ಇಲ್ಲದ ಹಳ್ಳಿ ಪ್ರದೇಶದ ಶಾಲೆಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ, ಇವತ್ತು ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ನಡುವೆ ವಿದ್ಯಾರ್ಥಿಗಳ ಸೇರ್ಪಡೆಗೆ ಪೈಪೋಟಿ ನಡೆಯುತ್ತಿದ್ದು ಪಟ್ಟಣದ ಶಾಲೆಗಳ ಗುಣಮಟ್ಟ ಗ್ರಾಮೀಣ ಭಾಗದ ಶಾಲೆಗಲ್ಲಿ ಇಲ್ಲದ ಕಾರಣ ಇಂತಾ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ, ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶದ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಶಾಲೆಗಳು ಇವತ್ತು ಮೂಲಭೂತ ಸೌಕರ್ಯ ಇತರೆ ಕೊರತೆಗಳಿಂದ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿವೆ, ನೂತನ ಸರ್ಕಾರ ಪೇಟೆ, ಪಟ್ಟಣ, ಗ್ರಾಮೀಣ ಭಾಗದ ಎಲ್ಲಾ ಶಾಲೆಗಳಿಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕೊಡುವುದರ ಜೊತೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಉಳಿವಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!