spot_img
Monday, April 27, 2026
spot_img

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಶಾಶ್ವತ ತಡೆಗೋಡೆ: ಪರಿಶೀಲನೆಗೆ ಕೇಂದ್ರದ ತಂಡ-ಸಂಸದ ಬಿ.ವೈ.ರಾಘವೇಂದ್ರ

ಮರವಂತೆ: ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಭೇಟಿ ನೀಡಿ, ಕಡಲ್ಕೊರೆತದಿಂದ ಈಗಾಗಲೇ ಆಗಿರುವ ಹಾನಿಯ ಬಗ್ಗೆ ಮೀನುಗಾರರ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಹಾಗೂ ಈಗ ತಾತ್ಕಾಲಿಕ ಕ್ರಮದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತೀ ವರ್ಷ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗುತ್ತದೆ. ಮಧ್ಯರಾತ್ರಿಯೂ ಕೂಡಾ ಆತಂಕವಿರುತ್ತದೆ. ಆಧ್ಯತೆ ಮೇರೆಗೆ ಶಾಶ್ವತ ಪರಿಹಾರಕ್ಕೆ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇನೆ. ಇದೇ 26ನೇ ತಾರೀಕಿನಂದು ಕೇಂದ್ರದ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ನಾನು ಕೂಡಾ ಆದಷ್ಟು ಬೇಗ ಹಣವನ್ನು ಮಂಜೂರು ಮಾಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಯಾವುದೇ ಸರ್ಕಾರ ಇದ್ದರೂ ಕೂಡಾ ಅಭಿವೃದ್ದಿಗೆ ತೊಂದರೆಯಾಗುವುದಿಲ್ಲ ಎನ್ನುವ ನನ್ನ ನಂಬಿಕೆ. ಆ ಹಿನ್ನೆಲೆಯಲ್ಲಿ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯರನ್ನು ಪೋನ್ ಮೂಲಕ ಸಂಪರ್ಕಿಸಿದ್ದೇನೆ ಎಂದರು.

ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಂದರ್ಭದಲ್ಲಿ ಮೀನುಗಾರಿಕಾ ಬಂದರು ಆಗಬೇಕು ಎಂದಾಗ 54 ಕೋಟಿ ಮಂಜೂರಾತಿ ಮಾಡಿದರು. ಅದರ ಮುಂದುವರಿದ ಭಾಗವಾಗಿ 80 ಕೋಟಿ ರೂ. ಟೆಂಡರ್ ಆಗಿದೆ. ಮುಂದುವರಿದ ಕಾಮಗಾರಿಗೆ ಮಂಜೂರಾದ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ವಿನಂತಿ ಮಾಡಿಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಗುರುರಾಜ ಗಂಟಿಹೊಳೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತಹಶೀಲ್ದಾರ್ ಶ್ರೀಕಾಂತ್, ಶ್ರೀನಿವಾಸ ಮೂರ್ತಿ, ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ, ಮೀನುಗಾರರ ಮುಖಂಡರಾದ ವಾಸುದೇವ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!