spot_img
Monday, April 27, 2026
spot_img

ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ‘ಮಕ್ಕಳ ಪ್ರತಿಭಾ ಪ್ರದರ್ಶನ’

     kundapura: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವನ್ನು ನಡೆಸಲಾಯಿತು.

ಮಕ್ಕಳಲ್ಲಿರುವ ಸುಪ್ತಪ್ರತಿಭೆಯನ್ನು ಅರಿಯದೇ ಅಧ್ಯಾಪಕರು ಅದನ್ನು ಬೆಳೆಸುವುದು ಕಷ್ಟಸಾಧ್ಯ. ಶಾಲಾರಂಭದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಲೋಸುಗ ಮಕ್ಕಳ ಪ್ರತಿಭಾ ಪ್ರದರ್ಶನವನ್ನು ನಡೆಸಲಾಯಿತು. ಇಲ್ಲಿ ಮಕ್ಕಳು ಸಮೂಹನೃತ್ಯ, ಸಮೂಹಗಾನ, ನಾಟಕ, ಭರತನಾಟ್ಯ ಮೊದಲಾದವುಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದಲೇ ನಿರ್ವಹಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ಕುಮಾರಿ ಸಮೀಕ್ಷಾ ನಿರೂಪಿಸಿದರು. ಕುಮಾರಿ ನೇಹಾ ಸ್ವಾಗತಿಸಿ, ಸಾತ್ವಿಕ್ ಧನ್ಯವಾದವನ್ನು ಸಮರ್ಪಿಸಿದರು.

      ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಆಡಳಿತಾಧಿಕಾರಿ ವೀಣಾರಶ್ಮೀ ಎಂ , ಶಾಲಾ ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!