spot_img
Tuesday, April 28, 2026
spot_img

ಗಂಗೊಳ್ಳಿಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ: ವೈದ್ಯರಿಗೆ ಸನ್ಮಾನ


ಗಂಗೊಳ್ಳಿ, ಜು.1: ವೈದ್ಯರು ರೋಗಿಗಳ ಪಾಲಿನ ದೇವರು. ವೈದ್ಯರಿಲ್ಲದಿದ್ದರೆ ಪರಿಸ್ಥಿತಿ ಹೇಗಿರುತ್ತಿತ್ತೋ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ದೇಶದ ಗಡಿ ರಕ್ಷಣೆ ಮಾಡುವ ಯೋಧರಿಗೆ ನೀಡುವ ಗೌರವ ವೈದ್ಯರಿಗೂ ಸಿಗಬೇಕು. ವೈದ್ಯಕೀಯ ವೃತ್ತಿ ಎಂಬುದು ಜನರ ಸೇವೆಗಾಗಿ ಇರುವ ಒಂದು ಅವಕಾಶ. ವೈದ್ಯರನ್ನು ಸಂಶಯದ ದೃಷ್ಟಿಯಿಂದ ನೋಡದೆ ಅವರ ನಂಬಿಕೆ ಇಡಬೇಕು. ನಂಬಿಕೆ ಇದ್ದರೆ ನಮ್ಮ ಯಾವುದೇ ಕಾಯಿಲೆಗಳೂ ಗುಣವಾಗುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಎಚ್.ಗಣೇಶ ಕಾಮತ್ ಹೇಳಿದರು.

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಗಂಗೊಳ್ಳಿ ಪ್ರಧಾನ ಕಛೇರಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಶನಿವಾರ ಜರಗಿದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಗಂಗೊಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಾದ ಡಾ.ಕಾಶೀನಾಥ ಪೈ, ಡಾ.ಎ.ಆರ್.ಕೊಡ್ಗಿ, ಡಾ.ಮಹೇಶ ಜಿ., ಡಾ.ಸುಜಾತಾ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಡಾ.ಮೋಹನದಾಸ ಪೈ, ಡಾ.ವೀಣಾ ಕಾರಂತ್ ಅವರನ್ನು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎಸ್.ವೆಂಕಟರಮಣ ಆಚಾರ್ಯ, ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ ನಾಯಕ್, ಮಹಾಬಲ ಪೂಜಾರಿ, ಎನ್.ಮಾಧವ ಕಿಣಿ, ಮಾಲಾ ಕೆ.ನಾಯಕ್, ಗೀತಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಸಹಕಾರಿಯ ನಿರ್ದೇಶಕ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ನಿರ್ದೇಶಕ ಕೆ.ರಾಮನಾಥ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!