spot_img
Tuesday, April 28, 2026
spot_img

ಮೂಡ್ಲಕಟ್ಟೆ ಸ.ಹಿ.ಪ್ರಾ.ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್, ಕರಾಟೆ, ಯಕ್ಷಗಾನ ತರಗತಿಗಳ ಉದ್ಘಾಟನೆ

ಕುಂದಾಪುರ, ಜು.1: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ಲಕಟ್ಟೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ, ಕರಾಟೆ ತರಗತಿ ಹಾಗೂ ಯಕ್ಷಗಾನ ತರಗತಿಗಳನ್ನು ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಮೇಲ್ವಿನ್ ಡಿಸೋಜಾ ಅವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ್ ಶೇರೆಗಾರ್ ವಹಿಸಿದ್ದರು. ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಸಿದ್ದಾರ್ಥ್ ಶೆಟ್ಟಿ ಅವರು ಕೊಡುಗೆಯಾಗಿ ನೀಡಿದ ನೋಟ್ಸ್ ಪುಸ್ತಕಗಳನ್ನು ಪ್ರಾಂಶುಪಾಲರಾದ ಮೇಲ್ವಿನ್ ಡಿಸೋಜಾ ವಿತರಿಸಿದರು.
ಮೂಡ್ಲಕಟ್ಟೆ ಹಳೆ ವಿದ್ಯಾರ್ಥಿ ಶರತ್ ಆಚಾರ್ 1ನೇ ತರಗತಿಯ ವಿದ್ಯಾರ್ಥಿಗಳಿಗೆ ಬ್ಯಾಗು ಹಾಗೂ ಕೊಡೆಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಕರಾಟೆ ತರಬೇತುದಾರ ಕಿರಣ್ ಆಚಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಆಚಾರ್, ಹಳೆ ವಿದ್ಯಾರ್ಥಿ ಜಗದೀಶ್, ವಾಹನ ನಿರ್ವಹಣೆ ಸಮಿತಿಯ ಅಧ್ಯಕ್ಷ ಸುರೇಶ್ ದೇವಾಡಿಗ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಂತಾ, ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್, ಸ್ಪೋಕನ್ ಇಂಗ್ಲೀಷ್ ತರಗತಿ ಶಿಕ್ಷಕಿ ದೀಪಿಕಾ, ಎಸ್.ಡಿ.ಎಂ.ಸಿ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಐವನ್ ಸಂತೋಷ್ ಸಾಲಿನ್ಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗುರುರಾಜ್ ಆಚಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!