spot_img
Sunday, June 14, 2026
spot_img

ರಾಷ್ಟ್ರೀಯ ವೈದ್ಯರ ದಿನಾಚರಣೆಯಂದು ವೈದ್ಯರನ್ನು ಸನ್ಮಾನಿಸಿದ ಪ್ರಗತಿಪರ ಕೃಷಿಕ


ಸಿದ್ದಾಪುರ, ಜು.1: ವೈದ್ಯರನ್ನು ದೇವರಿಗೆ ಹೋಲಿಸುವ ಸಂಸ್ಕೃತಿ ನಮ್ಮದು. ಜುಲೈ 1 ರಾಷ್ಟ್ರೀಯ ವೈದ್ಯರ ದಿನವಾಗಿ ಪ್ರಸಿದ್ಧಿ ಪಡೆದಿದೆ. ಸಿದ್ಧಾಪುರದ ಯುವ ಕೃಷಿಕರೊಬ್ಬರು ರಾಷ್ಟ್ರೀಯ ವೈದ್ಯರ ದಿನಾಚರಣೆಯಂದು ವೈದ್ಯರನ್ನು ಸನ್ಮಾನಿಸುವ ಮೂಲಕ ಗಮನ ಸಳೆದಿದ್ದಾರೆ.

ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಯುವ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು ಈ ಬಾರಿಯ ವೈದ್ಯರ ದಿನಾಚರಣೆಯಂದು ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಕ್ಷಾ ಹಾಗೂ ಸಿದ್ಧಾಪುರ ವಾಸುಕಿ ಕ್ಲಿನಿಕ್‌ನ ವೈದ್ಯರಾದ ಡಾ.ಜಗದೀಶ ಶೆಟ್ಟಿ ಅವರನ್ನು ಸನ್ಮಾನಿಸಿದ್ದಾರೆ.

ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಶ್ರೀಕಾಂತ್ ರಾವ್, ಉದ್ಯಮಿ ಎಸ್.ಪಾಂಡುರಂಗ ಪೈ, ಶ್ರೀಕಾಂತ ನಾಯಕ್, ಭೋಜ ಶೆಟ್ಟಿ ಕಡ್ರಿ ಉಪಸ್ಥಿತರಿದ್ದರು.

ಟಿ.ಜಿ ಪಾಂಡುರಂಗ ಪೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ರೂವಾರಿ ರಾಜೇಂದ್ರ ಬೆಚ್ಚಳ್ಳಿ ಕಾರ್ಯಕ್ರಮ ಆಶಯ ವಿವರಿಸಿದರು. ಪ್ರತಾಪಚಂದ್ರ ಕಿಣಿ ವಂದಿಸಿದರು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!