spot_img
Tuesday, April 28, 2026
spot_img

ವೈದ್ಯರ ದಿನಾಚರಣೆ: ಡಾ.ಉತ್ತಮ್ ಕುಮಾರ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ : ಮಾರಣಾಂತಿಕ ಕಾಯಿಲೆಗಳನ್ನೂ ಗುಣಪಡಿಸಿ, ರೋಗಿಗಳಿಗೆ ಪುನರ್ಜನ್ಮ ನೀಡುವ ವೈದ್ಯರು ದೇವರ ಸಮಾನ. ಆದ್ದರಿಂದಲೇ ಸಮಾಜದಲ್ಲಿ ವೈದ್ಯರು ಮತ್ತು ವೈದ್ಯಕೀಯ ವೃತ್ತಿಗೆ ಬಹಳ ಗೌರವವಿದೆ ಎಂದು ನಿವೃತ್ತ ಮುಖ್ಯೊಪಾಧ್ಯಾಯ ಉಪ್ಪಿನಕುದ್ರು ವೆಂಕಟರಮಣ ಹೊಳ್ಳ ಹೇಳಿದರು.

ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದಲ್ಲಿ ದಶಕಗಳಿಗೂ ಹೆಚ್ಚು ಸಮಯದಿಂದ ಖ್ಯಾತವಾದ ಉತ್ತಮ್ ಹೊಮಿಯೋ ಕ್ಲಿನಿಕ್ ನ ಡಾ.ಉತ್ತಮ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಿ ಮಾತನಾಡಿದರು.

ಕೃತಜ್ಞತೆ ಸಲ್ಲಿಸಿದ ಡಾ.ಉತ್ತಮ್ ಕುಮಾರ್ ಶೆಟ್ಟಿ, ವೈದ್ಯರು ತಮ್ಮ ಜವಾಬ್ದಾರಿ ಅರಿತು ಕಾರ್ಯಾಚರಿಸಿದಾಗ ಮಾತ್ರ ಸಮಾಜ ಅವರನ್ನು ಗೌರವಿಸುತ್ತದೆ. ಹಾಗೆಯೇ, ರೋಗಿಗಳು ಕೂಡಾ ತಮ್ಮ ವೈದ್ಯರಲ್ಲಿ ವಿಶ್ವಾಸವಿರಿಸಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ನುಡಿದರು.

ಹಿರಿಯ ಪತ್ರಕರ್ತ ಕೆ. ಜಿ. ವೈದ್ಯ ಶುಭ ಹಾರೈಸಿದರು. ಸುಷೇಣ ಹೊಳ್ಳ, ಸಿಬಂದಿಗಳಾದ ಸರಸ್ವತಿ, ಪವಿತ್ರ ಮತ್ತು ಮಹೇಶ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!