spot_img
Tuesday, April 28, 2026
spot_img

ಜೆಸಿ‌ಐ ಕುಂದಾಪುರ ಸಿಟಿ ವತಿಯಿಂದ ಡಾ.ಸೋನಿ ಅವರಿಗೆ ಸನ್ಮಾನ


ಕುಂದಾಪುರ: ಜೆಸಿ‌ಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಕುಂದಾಪುರ ಆಯುಷ್ಯಧಾಮ ಆಸ್ಪತ್ರೆಯ ವೈದ್ಯರಾದ ಡಾ.ಸೋನಿ ಅವರನ್ನು ಕುಂದಾಪುರದ ಹೋಟೆಲ್ ಶ್ರೇಯಸ್ ಇನ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಡಾ.ಸೋನಿಯವರು ತಮ್ಮ ಜವಾಬ್ದಾರಿ ಅರಿತು ಕಾರ್ಯಾಚರಿಸಿದಾಗ ಮಾತ್ರ ಸಮಾಜ ಅವರನ್ನು ಗೌರವಿಸುತ್ತದೆ. ಹಾಗೆಯೇ ರೋಗಿಗಳು ಕೂಡ ತಮ್ಮ ವೈದ್ಯರಲ್ಲಿ ವಿಶ್ವಾಸ ವಿರಿಸಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದರು.

ಸಮಾರಂಭದಲ್ಲಿ ಜೆಸಿ‌ಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ವಲಯ ಉಪಾಧ್ಯಕ್ಷ ಅಭಿಲಾಶ್, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ನಾಗೇಂದ್ರ ಪೈ, ನಾಗೇಶ್ ನಾವಡ, ವಿಜಯ ಭಂಡಾರಿ, ಲೇಡಿ ಜೇಸಿ ಅಧ್ಯಕ್ಷೆ ಪ್ರೇಮ, ಜೊತೆ ಕಾರ್ಯದರ್ಶಿ ಶೈಲಾ, ಸದಸ್ಯರಾದ ದಿನೇಶ್ ಪುತ್ರನ್, ಅನಿತಾ ನಾಗರಾಜ ಪಾಟ್ವಲ್, ಶ್ರುತಿ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!