spot_img
Sunday, June 14, 2026
spot_img

ಸಿ.ಎ ಅಂತಿಮ ಪರೀಕ್ಷೆಯಲ್ಲಿ ಸಚಿನ್ ಮೊಗವೀರ ಇವರಿಗೆ 442 ಅಂಕ


ಕುಂದಾಪುರ: ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಮೇ 2023ರಲ್ಲಿ ನೆಡೆಸಿದ ಸಿ‌ಎ ಫೈನಲ್ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಕಾವ್ರಾಡಿ ಗ್ರಾಮದ ಮುಂಬಾರು ಗುಡ್ಡಿಯ ಸಚಿನ್ ಮೊಗವೀರ ಸಿ.ಎ ಅಂತಿಮ ಪರೀಕ್ಷೆಯಲ್ಲಿ 442 ಅಂಕ ಪಡೆಯುವ ಮೂಲಕ ಉತ್ತೀರ್ಣರಾಗಿ ಲೆಕ್ಕಪರಿಶೋಧಕರಾಗಿ ಹೊರಹೊಮ್ಮಿದ್ದಾರೆ.

ಸಾಧಿಸುವ ಛಲವೊಂದಿದ್ದರೆ ಸಾಧನೆ ಅಸಾಧ್ಯವಲ್ಲ ಎನ್ನುವುದನ್ನು ಸಚಿನ್ ಮೊಗವೀರ ತೋರಿಸಿಕೊಟ್ಟಿದ್ದಾರೆ. ಸಂತೋಷ್ ಹಾಗೂ ಸವಿತಾ ದಂಪತಿಗಳ ಪುತ್ರರಾದ ಸಚಿನ್ ಕಲಿಕೆಯಲ್ಲಿ ಚುರುಕಿನ ವಿದ್ಯಾರ್ಥಿ. ಮನೆಯಲ್ಲಿ ಬಡತನವಿತ್ತು. ಕಾರ್ಖಾನೆಯಲ್ಲಿ ಕೆಲಸ ಮಾಡಿ ವಿದ್ಯಾಭ್ಯಾಸ ಕೊಡಿಸಿದ ತಾಯಿ, ಪರಿಶ್ರಮದಲ್ಲಿಯೇ ವಿದ್ಯಾರ್ಥಿ ಜೀವನ ನಡೆಸಿದ ಸಚಿನ್ ಇಂದು ಸಾಧನೆಯ ಮೇಲ್ಪಂಕ್ತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಪಡುವಾಲ್ತೂರು ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ, ಕುಂದಾಪುರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಭಂಡರ್ಕಾಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಇವರು ಬಳಿಕ ಉದ್ಯೋಗ ಅರಸಿ ಬೆಂಗಳೂರಿಗೆ ತೆರಳಿದರು. ಅಲ್ಲಿಂದಲೇ ಸಿ.ಎ ಪರೀಕ್ಷೆ ಬರೆದಿದ್ದಾರೆ.

ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ತನಕ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿ ಸಚಿನ್ ಮೊಗವೀರ ಸಾಧನೆ ಮಾದರಿಯಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!