Thursday, November 21, 2024

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ವತಿಯಿಂದ 325 ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಸಮವಸ್ತ್ರಗಳ ವಿತರಣೆ


ಕುಂದಾಪುರ, ಜು.8: ಉಡುಪಿ ಜಿಲ್ಲೆಯ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ರಿ., ಬೆಂಗಳೂರು ಇವರು ಉಡುಪಿ ಜಿಲ್ಲೆಯ 325 ಸರ್ಕಾರಿ, ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಕೊಡುಗೆಯಾಗಿ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜುಲೈ 8 ಶನಿವಾರ ಕುಂದಾಪುರ ಅಂಕದಕಟ್ಟೆಯ ಸಹನಾ ಕನ್ವನ್ಷನ್ ಸೆಂಟರ್‌ನಲ್ಲಿ ನಡೆಯಿತು.

ಮಾಜಿ ಸಚಿವರು ಕಾರ್ಕಳ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಭಾರತೀಯ ಸಂಸ್ಕೃತಿಯಲ್ಲಿ ಅನ್ನ, ಆರೋಗ್ಯ, ಅಕ್ಷರ ವ್ಯಾಪಾರೀಕರಣವಾಗಬಾರದು. ಆದರೆ ಇವತ್ತು ಅದುವೇ ದೊಡ್ಡ ಆದಾಯ ತರುವ ಕ್ಷೇತ್ರಗಳಾಗಿವೆ. ಈ ನಡುವೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮೂಲಕ ಎಚ್.ಎಸ್.ಶೆಟ್ಟಿಯವರು ತಮ್ಮ ದುಡಿಮೆಯ ಸಿಂಹಪಾಲು ಮೊತ್ತವನ್ನು ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿದ್ದಾರೆ. ಅವರ ಶೈಕ್ಷಣಿಕ, ಸಮಾಜಮುಖಿ ಚಿಂತನೆಗಳು ಪ್ರೇರಕವಾಗಿದೆ ಎಂದರು.

ಕುಂದಾಪುರ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೇಕಾರ್ ಅವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 1 ಲಕ್ಷ ರೂ.ನಗದನ್ನು ಒಳಗೊಂಡಿದೆ.

ಉಡುಪಿ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ, ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲೆ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ. ಕಾರ್ಯದರ್ಶಿ ಡಾ.ಸುಮನಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹೆಚ್.ಎಸ್.ಶೆಟ್ಟಿ ಅವರ ಪರವಾಗಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಅಭಿನಂದಿಸಲಾಯಿತು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿಯ ಅಧ್ಯಕ್ಷರಾದ ಹೆಚ್.ಎಸ್.ಶೆಟ್ಟಿ ಸ್ವಾಗತಿಸಿದರು. ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾರತಿ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು.

ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರಾದ ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರ್ವಹಿಸಿದರು. ಟ್ರಸ್ಟ್‌ನ ಕೋಶಾಧಿಕಾರಿ ರಾಜೀವ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!