spot_img
Monday, April 27, 2026
spot_img

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಹಾಗೂ ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕøತಿಕ ದತ್ತಿ ಸಂಸ್ಥೆ (ರಿ.) ಕುಂದಾಪುರ ಇವರ ಆಶ್ರಯದಲ್ಲಿ 31ನೇ ವರ್ಷದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಇವರು ಕೊಡ ಮಾಡುವ 2022-23 ನೇ ಸಾಲಿನ ಸರಕಾರಿ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90 ಮತ್ತು ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿಗಳನ್ನು ದಿನಾಂಕ 15/07/2023ರಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಇದರ ಕಛೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ.

ದಿನಾಂಕ 10/08/2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಕುಂದಾಪುರ ಮತ್ತು ಬೈಂದೂರು ತಾಲೂಕಿನ ಬಿಲ್ಲವ ಸಮಜದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕುಂದಾಪುರ ಹಾಗೂ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಅಧ್ಯಕ್ಷರು : 9945196693
ಕಾರ್ಯದರ್ಶಿ : 9164708055
ಕಛೇರಿ : 7975312962

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!