Sunday, September 8, 2024

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೆ. ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ


ಕುಂದಾಪುರ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ.ರೈ ತಿಳಿಸಿದ್ದಾರೆ.

ಸಂಘದ ಸದಸ್ಯರ ಮಕ್ಕಳಿಗೆ ೨೦೨೨-೨೩ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.೮೫ ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್‌ಸೈಟ್ http://ramakrishnacredit.com/ ನಲ್ಲಿ ಲಭ್ಯವಿದ್ದು ಜುಲೈ 31, ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!