Sunday, September 8, 2024

ಕುಂದಾಪುರ: ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ


ಕುಂದಾಪುರ: ರಾಹುಲ್ ಗಾಂಧಿಯವರ ತೇಜೊವಧೆಯ ವಿರುದ್ಧ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ನೇತೃತ್ವದಲ್ಲಿ ಜು.೧೨ರಂದು ಕುಂದಾಪುರ ಶಾಸ್ತ್ರಿ ವೃತ್ತದ ಬಳಿಯಲ್ಲಿ ಮೌನ ಪ್ರತಿಭಟನೆ ನಡೆಯಿತು.

ರಾಷ್ಟ್ರವ್ಯಾಪ್ತಿ ಮೌನ ಪ್ರತಿಭಟನೆಗೆ ಪಕ್ಷ ಕರೆ ನೀಡಿರುವ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಕೂಡಾ ಪ್ರತಿಭಟನಾನಿರತರು ಕುತ್ತಿಗೆಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ, ಕುಂದಾಪುರ ಕ್ಷೇತ್ರದ ಅಭ್ಯರ್ಥಿ ದಿನೇಶ ಹೆಗ್ಡೆ, ಪಕ್ಷದ ಮುಖಂಡರಾದ ಶಿವರಾಮ ಶೆಟ್ಟಿ, ಬಿ. ಹೆರಿಯಣ್ಣ, ಕೆದೂರು ಸದಾನಂದ ಶೆಟ್ಟಿ, ಅಶೋಕ್ ಪೂಜಾರಿ, ವಿಕಾಸ್ ಹೆಗ್ಡೆ, ದೇವಾನಂದ ಶೆಟ್ಟಿ, ವಿಕಾಸ್ ಹೆಗ್ಡೆ, ಇಚ್ಚಿತಾರ್ಥ ಶೆಟ್ಟಿ, ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ಚಂದ್ರಶೇಖರ್ ಖಾರ್ವಿ, ಅಶ್ಬಕ್, ಶ್ರೀಧರ್ ಶೇರೆಗಾರ್, ಅಬ್ಬು, ಎನ್ ಎಸ್ ಯು ಐ ನ ಸುಜನ್ ಶೆಟ್ಟಿ, ಗಣೇಶ್ ಶೇರೆಗಾರ್, ಜ್ಯೋತಿ ಪುತ್ರನ್, ರೇವತಿ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಗಂಗಾಧರ್ ಶೆಟ್ಟಿ, ಜಾನಕಿ ಬಿಲ್ಲವ, ಅಭಿಜಿತ್ ಪೂಜಾರಿ, ಆಶಾ ಕರ್ವಾಲ್ಲೊ, ಶೋಭಾ ಸಚ್ಚಿದಾನಂದ, ಜ್ಯೋತಿ ನಾಯ್ಕ್, ರಮೇಶ್ ಶೆಟ್ಟಿ, ರಾಕೇಶ್ ಶೆಟ್ಟಿ, ಮೇಬಲ್ ಡಿಸೋಜ, ಕೇಶವ್ ಭಟ್, ಅಶೋಕ್ ಸುವರ್ಣ, ದಿವಾಕರ್ ಶೆಟ್ಟಿ ಕೋಣಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಎ‌ಐಸಿಸಿ ಮಾಜಿ ಅಧ್ಯಕ್ಷರಾಗಿರುವ ರಾಹುಲ್ ಗಾಂಧಿಯವರು ವಿವಿಧ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದ್ದಾರೆ. ಈ ನಿರ್ಭಿತಿ ನಡೆಯನ್ನು ಸಹಿಸಿಕೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಪದನಾಮ ಬಳಕೆಯನ್ನೇ ನೆಪವಾಗಿರಿಸಿಕೊಂಡು ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಸೇಡಿನ ಹುನ್ನಾರ ಖಂಡನಾರ್ಹವಾದುದು. ಆ ಹಿನ್ನೆಲೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಇಂದು ಮೌನ ಪ್ರತಿಭಟನೆ ನಡೆಸುತ್ತಿದೆ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಮಾಧ್ಯಮದವರೊಂದಿಗೆ ಮಾತನಾಡಿ ರಾಹುಲ್ ಗಾಂಧಿಯವರನ್ನು ರಾಜಕೀಯ ಮುಗಿಸುವ ಹುನ್ನಾರದೊಂದಿಗೆ ಈ ಎಲ್ಲ ಕಾರ್ಯಗಳು ನಡೆಯುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಶಾಂತಿ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕುಡಿ ರಾಹುಲ್ ಗಾಂಧಿಯವರ ರಾಜಕೀಯ ಜೀವನವನ್ನು ಮುಗಿಸಲು ಸಾಂವೀಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಏನೇ ಮಾಡಿದರೂ ಕೂಡಾ ರಾಹುಲ್ ಗಾಂಧಿಯವರು ದೇಶದ ಮುಂದಿನ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!