spot_img
Thursday, April 30, 2026
spot_img

ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಗ್ರಹಣ


ಉಡುಪಿ, ಜು.12: ಉಡುಪಿ ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಭೆಯು ಜು.10ರಂದು ಉಡುಪಿಯ ಪ್ರಗತಿ ಸೌಧ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿಯವರಿಗೆ ನಿಕಟಪೂರ್ವ ಅಧ್ಯಕ್ಷರಾದ ನವೀನ್ ಅಮೀನ್ ಅಧಿಕಾರ ಹಸ್ತಾಂತರಿಸಿದರು.

ಕಾರ್ಯಕ್ರಮಕ್ಕೆ ಕುಂದಾಪುರ, ಬೈಂದೂರು ತಾಲೂಕಿನ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಬಿ.ಅಣ್ಣಪ್ಪ ಹೆಗ್ಡೆ ದೀಪ ಪ್ರಜ್ವಲನೆಗೊಳಿಸುವ ಮೂಲಕ ಚಾಲನೆ ನೀಡಿದರು. ವೇದಿಕೆಯಲ್ಲಿ ಜನಜಾಗೃತಿ ಅಧ್ಯಕ್ಷರಾದ ನವೀನ್‌ಚಂದ್ರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ನವೀನ್ ಅಮೀನ್, ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು, ಉಡುಪಿ, ಕಾಪು, ಬ್ರಹ್ಮಾವರ, ಕಾರ್ಕಳ, ಹೆಬ್ರಿ, ಕುಂದಾಪುರ-1, ಕುಂದಾಪುರ-2, ಬೈಂದೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರು, ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ 2023-24ನೇ ಸಾಲಿನ ಕ್ರಿಯಾ ಯೋಜನೆಯ ಕುರಿತಂತೆ ಸಮಗ್ರ ಚರ್ಚೆ ನಡೆಸಲಾಯಿತು. ಈ ಸಂದರ್ಭ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮಧ್ಯ ಮಾರಾಟ, ಮೆಹಂದಿ ಕಾರ್ಯಕ್ರಮದಲ್ಲಿ ಮಧ್ಯಪಾನ ಬಳಕೆ, ಮಾದಕ ವಸ್ತು ದಂಧೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಕಡಿವಾಣ ಹಾಕುವ ಕುರಿತು ವೇದಿಕೆಯ ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರಸಕ್ತ ವರ್ಷದಲ್ಲಿ ಮದವರ್ಜನ ಶಿಬಿರ, ಮಾದಕ ವಸ್ತು ವಿರೋಧಿ ದಿನಾಚರಣೆ, ತಂಬಾಕು ವಿರೋಧಿ ದಿನಾಚರಣೆ, ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸುವ ಕುರಿತು ಮಾಹಿತಿ ನೀಡಲಾಯಿತು. ಪ್ರಸ್ತುತ ಅನುಷ್ಠಾನ ಕುರಿತಂತೆಯೂ ಚರ್ಚೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಯೋಜನಾಧಿಕಾರಿಗಳು ಹಾಗೂ ಜಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ನಿರೂಪಿಸಿ, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ ಸ್ವಾಗತಿಸಿ, ಕಾಪು ತಾಲೂಕು ಯೋಜನಾಧಿಕಾರಿ ಜಯಂತಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!