spot_img
Tuesday, April 28, 2026
spot_img

ನಾವುಂದ ಕಾಲೇಜಿನಲ್ಲಿ ಅಗ್ರಸ್ಥಾನಿಗೆ ನಗದು ಬಹುಮಾನ

ಬೈಂದೂರು: ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದದ್ದು ಮಾತ್ರವಲ್ಲದೆ ಬೈಂದೂರು ತಾಲೂಕಿಗೂ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ರಾಹುಲ್ ಅವರಿಗೆ 1995-96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.

ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಡಾ. ರಾಘವೇಂದ್ರ ಶೆಟ್ಟಿ ವಿದ್ಯಾರ್ಥಿಗೆ ಪ್ರೋತ್ಸಾಹಧನವನ್ನು ವಿತರಿಸಿದರು. ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಅರುಣ್ ನಾಯ್ಕ್ ಶುಭ ಹಾರೈಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!