Sunday, April 28, 2024

ವಿದ್ಯಾರ್ಥಿ ಜೀವನದಲ್ಲಿ ನಿರ್ದಿಷ್ಟ ಗುರಿ ಅಗತ್ಯ- ಡಾ. ಜಿ.ಶಂಕರ್


ಹೆಮ್ಮಾಡಿ, ಜು.16: ವಿದ್ಯಾರ್ಥಿಗಳಿಗೆ ತಾವು ಕಲಿಯುವ ಶಿಕ್ಷಣ ಸಂಸ್ಥೆ ಯಾವುದು ಎನ್ನುವುದು ಮುಖ್ಯವಲ್ಲ ಗುರಿ ಇಟ್ಟುಕೊಂಡು ಓದಬೇಕು. ಇವತ್ತು ಸಾಕಷ್ಟು ಅವಕಾಶಗಳು ವಿದ್ಯಾರ್ಥಿಗಳ ಮುಂದಿದ್ದು, ಆಸಕ್ತಿಯ ಕ್ಷೇತ್ರವನ್ನು ಆಯ್ದುಕೊಂಡು ಶ್ರದ್ದೆಯಿಂದ ಓದಿ ಉದ್ಯೋಗವನ್ನು ಪಡೆಯಬೇಕು. ಜೀವನದಲ್ಲಿ ಧೈರ್ಯವನ್ನು ಕಳೆದುಕೊಳ್ಳಬಾರದು. ಆತ್ಮವಿಶ್ವಾಸದಿಂದ ಮುನ್ನೆಡೆದಾಗ ಯಶಸ್ಸು ಸಾಧ್ಯವಾಗುತ್ತದೆ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ಡಾ.ಜಿ.ಶಂಕರ್ ಹೇಳಿದರು.

ಅವರು ಜು.೧೬ರಂದು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಸಂಘದ ಮುಖ್ಯ ಕಛೇರಿಯ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಮಾರ್ಗದರ್ಶನ ಶಿಬಿರದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದೇವೆ ಎನ್ನುವ ಕೀಳಿರಿಮೆಯನ್ನು ಇಟ್ಟುಕೊಳ್ಳಬೇಡಿ. ಸರ್ಕಾರಿ ಶಾಲಾ ಕಾಲೇಜುಗಳಲ್ಲಿಯೇ ಓದಿದ ಅದೆಷ್ಟು ಮಂದಿ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡಿದ್ದಾರೆ. ಶಿಕ್ಷಣ ಸಂಸ್ಥೆ ಮುಖ್ಯವಲ್ಲ, ಶ್ರದ್ಧೆ ಆಸಕ್ತಿಯಿಂದ ಓದುವುದು ಮುಖ್ಯ. ಒಳ್ಳೆಯ ಅಂಕ ಗಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಿ, ತಂದೆತಾಯಿ ಕನಸುಗಳನ್ನು ನನಸು ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಲಾಸ್ ಕ್ಷತ್ರೀಯ ಭಾಗವಹಿಸಿದ್ದರು. ಎಸ್.ಎಸ್.ಎಲ್.ಸಿ ಪಿಯುಸಿ ಬಳಿಕ ಮುಂದೇನು? ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ಸಿದ್ಧತೆ ಮಾಡಬೇಕು, ಇಂಜಿನಿಯರಿಂಗ್, ವೈದ್ಯಕೀಯ ಕ್ಷೇತ್ರದಲ್ಲಿ ಇರುವ ಇತರ ಅವಕಾಶಗಳು, ಸಿ.ಎ., ಸಿ.ಎಸ್, ಎಂ.ಬಿ.ಎ. ಇತ್ಯಾದಿ ಕೋರ್ಸುಗಳ ಬಗ್ಗೆ ಮಾಹಿತಿ ನೀಡಿದರು.

ಅಭಿಲಾಸ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಭಾಸ್ಕರ ಕೆ.ನಾಯ್ಕ ಕುಂಟನೇರ್‍ಲು ಅಧ್ಯಕ್ಷತೆ ವಹಿಸಿದ್ದರು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಮಲತಾ, ಸಂಘದ ಉಪಾಧ್ಯಕ್ಷ ವಸಂತ ಮೊಗವೀರ ತಗ್ಗರ್ಸೆ, ನಿರ್ದೇಶಕರುಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶ್ರೀಲಹರಿ, ಶ್ರದ್ಧಾ ಮೊಗವೀರ, ಪ್ರಜ್ವಲ್ ಮಾರ್ಗದರ್ಶನ ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರಾದ ಉದಯ ಕುಮಾರ್ ಹಟ್ಟಿಯಂಗಡಿ ಕಾರ್ಯಕ್ರಮ ನಿರ್ವಹಿಸಿದರು. ಶಂಕರನಾರಾಯಣ ಶಾಖೆಯ ಸಂತೋಷ್ ವಂದಿಸಿದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!