spot_img
Tuesday, April 28, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ: ಯಕ್ಷಗಾನ ತರಗತಿ ಉದ್ಘಾಟನೆ

ಕುಂದಾಪುರ: “ಮಕ್ಕಳಲ್ಲಿ ಭಾಷಾ ಬೆಳವಣಿಗೆ ಹಾಗೂ ಅತ್ಯುತ್ತಮ ಸಂವಹನ ಕೌಶಲ ರೂಢಿಸಲು ಯಕ್ಷಗಾನದ ಕಲಿಕೆ ವಿಶೇಷ ಕೊಡುಗೆ ನೀಡುತ್ತದೆ” ಎಂದು ಕೊಂಕಣ ರೈಲ್ವೆಯ ನಿವೃತ್ತ ಡೆಪ್ಯೂಟಿ ಚೀಫ್ ಇಲೆಕ್ಟ್ರಿಕಲ್ ಇಂಜಿನಿಯರ್ ರಘುನಾಥ ನಾಯಕ್, ಎಣ್ಣೆಹೊಳೆ ನುಡಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರು ಇಲ್ಲಿ ೨೦೨೩-೨೪ ನೇ ಸಾಲಿನ “ನಿರಂತರ ಯಕ್ಷಗಾನ ತರಗತಿ” ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಯಕ್ಷಗಾನ ತರಗತಿಯನ್ನು ನಡೆಸಿಕೊಡುತ್ತಿರುವ ಯಕ್ಷ ಗುರುಗಳಾದ ಐರೋಡಿ ಮಂಜುನಾಥ ಕುಲಾಲ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯಾ ಆರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕ ರವೀಂದ್ರ ನಾಯಕ್ ನಿರೂಪಿಸಿದರು ಹಾಗೂ ಜಯರಾಮ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!