spot_img
Tuesday, April 28, 2026
spot_img

ಕಾರಂತರ ಬದುಕು ಬರಹ ಸ್ಪೂರ್ತಿಯ ಸೆಲೆ- ನಳೀನ್ ಕುಮಾರ್ ಕಟೀಲ್


ಕೋಟ : ಡಾ. ಶಿವರಾಮ ಕಾರಂತರ ಬದುಕು ಬರಹ ಸ್ಪೂರ್ತಿಯ ಸೆಲೆಯಾಗಿದ್ದು, ಅವರ ಹೊಸ ಚಿಂತನೆಗಳು ಮುಂದಿನ ಜನಾಂಗಕ್ಕೆ ದಾರಿದೀಪವಾಗಿದ್ದು, ಇಂತಹ ಮಹಾನ್ ವ್ಯಕ್ತಿಯ ನೆನಪಿನಲ್ಲಿ ಕಾರಂತ ಥೀಮ್ ಪಾರ್ಕ್ ನಿರ್ಮಾಣದಿಂದ ಕಾರಂತರ ನೆನಪುಗಳು ಚಿರಸ್ಥಾಯಿಯಾಗಿ ಉಳಿಯಲಿದ್ದು, ಜೊತೆಗೆ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ, ಕಿರು ಸಭಾಂಗಣ ವೀಕ್ಷಿಸಿ ಇಲ್ಲಿನ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನ ಸಭೆ ಶಾಸಕ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಯಿಲಾಡಿ, ಬಿಜೆಪಿ ನಾಯಕರಾದ ಉದಯ್ ಕುಮಾರ್ ಶೆಟ್ಟಿ,ಶ್ರೀ ಶಂಕರ್ ಅಂಕದಕಟ್ಟೆ, ಸದಾನಂದ ಉಪ್ಪಿನಕುದ್ರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಪಿ.ಡಿ.ಓ ರವೀಂದ್ರ ರಾವ್, , ಟ್ರಸ್ಟಿ ಸುಬ್ರಾಯ್ ಆಚಾರ್ಯ, ಪಂಚಾಯತ್ ಸದಸ್ಯರು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!