spot_img
Wednesday, January 22, 2025
spot_img

ಬೈಲೂರು ಸ.ಹಿ.ಪ್ರಾ.ಶಾಲೆ: ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ


kundapura: ಕುಂದಾಪುರ ಶೈಕ್ಷಣಿಕ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ಹೆಚ್ಚುವರಿಯಾಗಿ ಬಳ್ಕೂರು ಶಾಲೆಗೆ ವರ್ಗಾವಣೆಗೊಂಡ ಸಹಶಿಕ್ಷಕ ಸಂತೋಷ ಮತ್ತು ಕೋರಿಕೆ ವರ್ಗಾವಣೆಯಲ್ಲಿ ನಾವುಂದ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ಪ್ರೌಢ ಶಾಲಾ ಸಹಶಿಕ್ಷಕ ನಾರಾಯಣ ಅಡಿಗರವರ ಬೀಳ್ಕೊಡುಗೆ ಕಾರ್ಯಕ್ರಮ ಜು.೨೨ರಂದು ನಡೆಯಿತು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಂತೋಷ ಕುಮಾರ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಮತ್ತು ಹಳೆವಿದ್ಯಾರ್ಥಿ ಸಂಘದ ಪರವಾಗಿ ವರ್ಗಾವಣೆ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು, ರೆಡ್‌ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿಯವರು, “ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು” ಎಂದು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ರಚನಾ ಕ್ರೋಡಬೈಲೂರು ಸಂಸ್ಥೆಯವರು, ಶಾಲಾ ಮುಖ್ಯ ಶಿಕ್ಷಕರು ಮತ್ತು ಅಧ್ಯಾಪಕ ವೃಂದದವರು ಹಾಗೂ ಅಂಗನವಾಡಿ ಕಾರ್ಯಕರ್ತೆ ಆಶಾಲತ ಶೆಟ್ಟಿ ಮತ್ತು ಸಹಾಯಕಿ ರಶ್ಮಿ ಪ್ರತ್ಯೇಕವಾಗಿ ವರ್ಗಾವಣೆಕೊಂಡ ಶಿಕ್ಷಕರನ್ನು ಸನ್ಮಾನಿದರು.
ಶಾಲಾ ಮಕ್ಕಳು ತಮ್ಮ ಪ್ರೀತಿಯ ಶಿಕ್ಷಕರಿಗೆ ವಿವಿಧ ಸ್ಮರಣಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮಮತಾ ಆರ್ ಶೆಟ್ಟಿ, ಶಾಲಾ ಎಸ್ ಡಿ ಎಮ್ ಸಿ ಮಾಜಿ ಅಧ್ಯಕ್ಷರು ಹಾಗೂ ಚಿಂತಕರಾದ ಸುಬ್ರಹ್ಮಣ್ಯ ಐತಾಳ್, ರಚನಾ ಕ್ರೋಡಬೈಲೂರು ಇದರ ಅಧ್ಯಕ್ಷ ಆನಂದ ಮೊಗವೀರ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ ಸ್ವಾಗತಿಸಿದರು. ಸಹ ಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದರು. ಗೌರವ ಶಿಕ್ಷಕಿಯರಾದ ಪ್ರಮೀಳಾ, ನಯನ ಸನ್ಮಾನ ಪತ್ರ ವಾಚಿಸಿದರು. ಗೌರವ ಶಿಕ್ಷಕಿ ಶ್ರುತಿ ವಂದಿಸಿದರು. ಸಹ ಶಿಕ್ಷಕಿ ಸಂಧ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!