Sunday, September 8, 2024

ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಪ್ರವಾಸಿಗ ನೀರುಪಾಲು

ಕುಂದಾಪುರ: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ನೋಡಲು ಬಂದಿದ್ದ ಪ್ರವಾಸಿಗ ಬಂಡೆಯ ಮೇಲೆ ನಿಂತು ಜಲಪಾತ ನೋಡುತ್ತಿದ್ದ ಸಂದರ್ಭ ಕಾಲುಜಾರಿ ಜಲಪಾತಕ್ಕೆ ಬಿದ್ದು ನಾಪತ್ತೆಯಾದ ಘಟನೆ ಜು.23ರ ಮಧ್ಯಾಹ್ನ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿಯ ಶರತ್ (23 ವ) ನಾಪತ್ತೆಯಾದ ಪ್ರವಾಸಿಗ.

ಶರತ್ ತನ್ನ ಸ್ನೇಹಿತ ಗುರುರಾಜ ನೊಂದಿಗೆ ಕಾರಿನಲ್ಲಿ ಭಾನುವಾರ ಬೆಳಿಗ್ಗೆ 7.30 ಗಂಟೆಗೆ ಭದ್ರಾವತಿಯಿಂದ ಕೊಲ್ಲೂರಿಗೆ ಹೊರಟಿದ್ದರು.
ಮಧ್ಯಾಹ್ನ ಸುಮಾರು 3.30ಕ್ಕೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಸೌಪರ್ಣಿಕ ನದಿಗೆ ಬಿದ್ದು ನಾಪತ್ತೆಯಾಗಿದ್ದಾನೆ.

ಮಳೆ ವ್ಯಾಪಕವಾಗಿ ಸುರಿಯುತ್ತಿರುವುದರಿಂದ ನೀರಿನ ಸೆಳೆತ ಹೆಚ್ಚಾಗಿದ್ದು ಕೊಚ್ಚಿಕೊಂಡು ಹೋಗಿದ್ದು ಶೋಧ ಕಾರ್ಯ ನಡೆಯುತ್ತಿದೆ. ಕೊಲ್ಲೂರು ಪೊಲೀಸರು, ಅಗ್ನಿಶಾಮಕದಳ, ಅರಣ್ಯ ಇಲಾಖೆ, ಈಶ್ವರ ಮಲ್ಪೆಯವರ ತಂಡ, ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರತ್ ಫಾಲ್ಸ್ ವೀಕ್ಷಿಸುತ್ತಿರುವ ದೃಶ್ಯ, ಜಲಪಾತಕ್ಕೆ ಬೀಳುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!