spot_img
Tuesday, April 28, 2026
spot_img

ಸ.ಕಿ.ಪ್ರಾ.ಶಾಲೆ ಕಳಿ-ಆಲೂರು: ನಿವೃತ್ತ ಮುಖ್ಯ ಶಿಕ್ಷಕಿಗೆ ಸನ್ಮಾನ


ಕುಂದಾಪುರ: ಬೈಂದೂರು ಶೈಕ್ಷಣಿಕ ವಲಯದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಳಿ-ಆಲೂರು ಇಲ್ಲಿ ಸುಮಾರು 21 ವರ್ಷಗಳ ಕಾಲ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಶ್ರೀಮತಿ ಜಿ.ಹೆಗಡೆ ಅವರನ್ನು ಶಾಲೆಯಲ್ಲಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ವಹಿಸಿ, ನಿವೃತ್ತ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೆಬಲ್ ಟ್ರಸ್ಟ್ ಚಿತ್ತೂರು ಇವರು ಕೊಡುಗೆಯಾಗಿ ನೀಡಿದ ಸುಸಜ್ಜಿತ ನಲಿಕಲಿ ಕೊಠಡಿಯನ್ನು ಟ್ರಸ್ಟ್‌ನ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಲೂರು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಗಾಣಿಗ, ಉಪಾಧ್ಯಕ್ಷ ರವಿ ಶೆಟ್ಟಿ ಆಲೂರು, ಸದಸ್ಯರಾದ ಸುಬ್ಬಣ್ಣ ಶೆಟ್ಟಿ ಆಲೂರು, ಗಂಗೆ ಶೆಟ್ಟಿ ಹೊಸ್ಕುಂದ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥಯ್ಯ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುಂಡು ಪೂಜಾರಿ ಹರವರಿ ಭಾಗವಹಿಸಿದ್ದರು.

ಶಾಲೆಯ ಮುಖ್ಯ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಎಲ್.ಕೆಜಿ-ಯು.ಕೆ.ಜಿ ನಿರ್ವಹಣಾ ಸಮಿತಿಯ ಅಧ್ಯಕ್ಷ ಡಾ.ರಾಜೇಶ್ ಬಾಯರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೃಷ್ಣ ಪೂಜಾರಿ ಸಾರದಮನೆ ವಂದಿಸಿದರು. ಶಿಕ್ಷಕ ವೀರೇಂದ್ರ ಜೋಗಿ ಮತ್ತು ನಾರಾಯಣ ಕೊಠಾರಿ ಕೆರಾಡಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!