spot_img
Tuesday, April 28, 2026
spot_img

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ‌ಐಟಿ) ವಿದ್ಯಾರ್ಥಿಯಾಗಿ ಪ್ರಣಮ್ಯ ತೆಕ್ಕಟ್ಟೆ ಆಯ್ಕೆ


ಕುಂದಾಪುರ: ಕೇಂದ್ರ ಸರಕಾರದ ಶಿಕ್ಷಣ ವಿಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ‌ಐಟಿ) ಖರಗ್‌ಪುರ ಪಶ್ಚಿಮ ಬಂಗಾಳದ ವಿದ್ಯಾ ಸಂಸ್ಥೆಗೆ 2023-24ನೇ ಸಾಲಿನ ಬಾಹ್ಯಾಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಇಂಜಿನಿಯರ್ ಪದವಿ ಶಿಕ್ಷಣ ಪಡೆಯಲು ಉಡುಪಿ ಜಿಲ್ಲೆಯಿಂದ ಪ್ರಣಮ್ಯ ಜಿ. ಹೆಚ್. ಆಯ್ಕೆಯಾಗಿದ್ದಾರೆ.

ಇವರು ತೆಕ್ಕಟ್ಟೆ ಶಿಕ್ಷಕ ದಂಪತಿಗಳಾದ ಹೆರಿಯ ಮತ್ತು ಗುಲಾಬಿ ಇವರ ಪುತ್ರಿ.

ಯಶಸ್ವೀ ಕಲಾವೃಂದ (ರಿ.) ಕೊಮೆ-ತೆಕ್ಕಟ್ಟೆ ಸಂಸ್ಥೆಯಲ್ಲಿ ಯಕ್ಷಗಾನ ಕಲಾವಿದರಾಗಿದ್ದು, ನೃತ್ಯ, ಗಾಯನ, ಚಿತ್ರಕಲೆ, ನಿರೂಪಣೆ, ಉಪನ್ಯಾಸ, ಚರ್ಚಾ ವಿಭಾಗದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಶಾಲಾ, ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮ ನೀಡುತ್ತಾ ಗುರುತಿಸಿಕೊಂಡಿದ್ದಾರೆ. ಅಂತರ್ ಕಾಲೇಜು ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾಗಿ, ಯುವ ಸಂವಾದ ಕಾರ್ಯಕ್ರಮದಲ್ಲಿ ಬಹುಮಾನವನ್ನು ಮುಡಿಗೇರಿಸಿಕೊಂಡ ಪ್ರತಿಭಾ ಸಂಪನ್ನೆ ಪ್ರಣಮ್ಯ. ಪಠ್ಯೇತರ ಚಟುವಟಿಕೆಯನ್ನು ಹವ್ಯಾಸಿಯಾಗಿ ಬೆಳೆಸಿಕೊಂಡ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ವಿಶ್ವ ವಿನಾಯಕ ನ್ಯಾಶನಲ್ ಇಂಗ್ಲೀಷ್ ಮೀಡಿಯಂ ಶಾಲೆ ತೆಕ್ಕಟ್ಟೆಯಲ್ಲಿ ಪೂರೈಸಿಕೊಂಡು ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ (NTSE) 2021ರಲ್ಲಿ ಉತ್ತೀರ್ಣರಾಗಿದ್ದಾರೆ. ಪದವಿ ಪೂರ್ವ ಶಿಕ್ಷಣವನ್ನು ವೆಂಕಟರಮಣ ಶಿಕ್ಷಣ ಸಂಸ್ಥೆ ಕುಂದಾಪುರದಲ್ಲಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ೭ನೇ ರ್‍ಯಾಂಕ್ ಪಡೆದಿದ್ದಾರೆ. ತಂದೆ-ತಾಯಿ ಪ್ರೋತ್ಸಾಹ, ಗುರು-ಹಿರಿಯರ ಮಾರ್ಗದರ್ಶನದಿಂದ ಜೆ.ಇ.ಇ. ಮೈನ್ಸ್ ಪರೀಕ್ಷೆಯನ್ನು ಬರೆದು ೨ನೇ ಹಂತಕ್ಕೆ ಆಯ್ಕೆಯಾಗಿ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾಗಿದ್ದಾರೆ. ಇವರ ಶಿಕ್ಷಣ ಸಾಧನೆಗೆ ವೇದಾಂತು ಶಿಕ್ಷಣ ಸಂಸ್ಥೆಯು ಆನ್-ಲೈನ್ ಶಿಕ್ಷಣ ತರಬೇತಿ ಮತ್ತು ಅಧ್ಯಯನದ ಮೆಟೀರಿಯಲ್ಸ್ ನೀಡಿ ಅನುಕೂಲ ಮಾಡಿಕೊಟ್ಟಿದೆ. ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ 2023-24ನೇ ಸಾಲಿನಲ್ಲಿ ಬಿ.ಟೆಕ್. ಇಂಜಿನಿಯರ್ ಪದವಿ ಶಿಕ್ಷಣವನ್ನು ಪಡೆಯಲು ಬಾಹ್ಯಾಕಾಶ ತಂತ್ರಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಬಾಲ್ಯದಿಂದಲೂ ಐ.ಐ.ಟಿ ವಿದ್ಯಾಸಂಸ್ಥೆಯ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಬೇಕೆಂಬ ಹಂಬಲದ ಕನಸ್ಸಿಗೆ ಅವಕಾಶ ದೊರೆತಂತಾಗಿದೆ. ಭಾರತೀಯ ತಂತ್ರಜ್ಙಾನ ಸಂಸ್ಥೆ (ಐ‌ಐಟಿ) ಖರಗ್‌ಪುರ ಪಶ್ಚಿಮ ಬಂಗಾಳ ಇಲ್ಲಿ ನಾಲ್ಕು ವರ್ಷದ ಬಿ.ಟೆಕ್ ಪದವಿ ಮತ್ತು ಎರಡು ವರ್ಷ ಎಂಟೆಕ್ ಪದವಿ ಶಿಕ್ಷಣ ಪಡೆಯಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!