spot_img
Tuesday, April 28, 2026
spot_img

ನಾಗೂರು: ಮಧ್ಯವರ್ಜನ ಶಿಬಿರ ಉದ್ಘಾಟನೆ

ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ ಬೈಂದೂರು, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಜನಜಾಗೃತಿ ವೇದಿಕೆ ಬೈಂದೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಕಿರಿಮಂಜೇಶ್ವರ ವಲಯ, ನಾವುಂದ ಕಿರಿಮಂಜೇಶ್ವರ ಹೇರೂರು ಕಂಬದಕೋಣೆ ಗ್ರಾಮ ಪಂಚಾಯತ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬೈಂದೂರು ತಾಲೂಕು ಮತ್ತು ಕಿರಿಮಂಜೇಶ್ವರ ವಲಯ ಇದರ ಸಂಯುಕ್ತ ಆಶ್ರಯದಲ್ಲಿ 1696ನೇ ಮಧ್ಯವರ್ಜನ ಶಿಬಿರ ನಾಗೂರಿನ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸೋಮವಾರ ಪ್ರಾರಂಭಗೊಂಡಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಈ ಜನ್ಮದಲ್ಲಿ ಮಾಡಿದ ಪಾಪದಿಂದ ವಿಮುಕ್ತಿ ಹೊಂದಲು ಒಂದು ಒಳ್ಳೆಯ ಅವಕಾಶ ಈ ಮದ್ಯವರ್ಜನ ಶಿಬಿರದಿಂದ ದೊರಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮದ್ಯವರ್ಜನ ಶಿಬಿರದ ಕುರಿತು ಮಾತನಾಡಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ, ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ ಶುಭ ಹಾರೈಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸತೀಶ್ ಎಂ.ನಾಯಕ್, ಮಹಾಬಲೇಶ್ವರ ಆಚಾರ್ಯ, ಕೃಷ್ಣ ಲಲಿತ ಕಲಾಮಂದಿರದ ಮಾಲಕ ರತ್ನಾಕರ ಉಡುಪ, ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ, ಕಿರಿಮಂಜೇಶ್ವರ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ನಾವುಂದ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ನರಸಿಂಹ ದೇವಾಡಿಗ, ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದ ಅಧ್ಯಕ್ಷ ಎನ್.ವಿ. ಪ್ರಕಾಶ್ ಐತಾಳ್, ಮೂಕಾಂಬಿಕಾ ಭತ್ತ ಒಕ್ಕೂಟದ ಅಧ್ಯಕ್ಷ ಚಂದ್ರ ಪೂಜಾರಿ, ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷ ಮಂಜು ಪೂಜಾರಿ, ಕಾರ್ಯದರ್ಶಿ ಮಂಜುನಾಥ್, ಕಿರಿಮಂಜೇಶ್ವರ ವಲಯದ ಅಧ್ಯಕ್ಷ ಸುರೇಂದ್ರ ನಾಯ್ಕ, ಕೊಲ್ಲೂರು ವಲಯದ ಅಧ್ಯಕ್ಷ ರವೀಂದ್ರ ಶೆಟ್ಟಿ, ಕೋಶಾಧಿಕಾರಿ ರವಿ ಪೂಜಾರಿ, ಜನಜಾಗೃತಿ ವೇದಿಕೆ ಗೋಳಿಹೊಳೆ ವಲಯ ಅಧ್ಯಕ್ಷ ಎಂ.ಆರ್. ಶೆಟ್ಟಿ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಹಕ್ಲಾಡಿ ಗಣಪಯ್ಯ ಶೆಟ್ಟಿ, ಗೋಳಿಹೊಳೆ ಶೇಖರ್ ಶೆಟ್ಟಿ, ಶಿಬಿರದ ಆರೋಗ್ಯ ಸಹಾಯಕಿ ನೇತ್ರಾವತಿ, ಬೈಂದೂರು ತಾಲೂಕಿನ ನವಜೀವನ ಸಮಿತಿಯ ಸದಸ್ಯರು, ಹೇರೂರು ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಕಿರಿಮಂಜೇಶ್ವರ ವಲಯದ ಸೇವಾ ಪ್ರತಿನಿಧಿಗಳು, ಮುಂತಾದವರು ಉಪಸ್ಥಿತರಿದ್ದರು.

ಬೈಂದೂರು ತಾಲೂಕು ಯೋಜನಾಧಿಕಾರಿ ಕೆ.ವಿನಾಯಕ ಸ್ವಾಗತಿಸಿದರು. ಶಿಬಿರಾಧಿಕಾರಿ ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಿಮಂಜೇಶ್ವರ ವಲಯದ ಮೇಲ್ವಿಚಾರಕ ರಾಘವೇಂದ್ರ ವಂದಿಸಿದರು. ವ್ಯವಸ್ಥಾಪನ ಸಮಿತಿಯ ಜೊತೆ ಕಾರ್ಯದರ್ಶಿ ದಿನೇಶ್ ಆಚಾರ್ಯ ಕಾರ್ಯಕ್ರಮದ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!