spot_img
Tuesday, April 28, 2026
spot_img

ಮರವಂತೆ ಹೊರಬಂದರು, ಉಪ್ಪುಂದದಲ್ಲಿ ಕಿರುಬಂದರು, ಬೈಂದೂರು ಸರ್ವ‌ಋತು ಬಂದರು ಬಗ್ಗೆ ಕೇಂದ್ರ ಸಚಿವರಿಗೆ ಸಂಸದರಿಂದ ಮನವಿ


ಸಂಸದ ಬಿ.ವೈ .ರಾಘವೇಂದ್ರ ಅವರು ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಇವರನ್ನು ಆ.4ರಂದು ಭೇಟಿ ಮಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ.85 ಕೋಟಿ ಮಂಜೂರಾಗಿದ್ದು, ಸಿ.ಆರ್.ಝೆಡ್ ಸಮಸ್ಯೆ ಸರಿಪಡಿಸಿ ಶೀಘ್ರ ಕಾಮಗಾರಿ ಕೈಗೊಳ್ಳಲು ಅನುಕೂಲ ಮಾಡಿಬೇಕಾಗಿ ಕೋರಿದರು.

ಇತ್ತೀಚಿಗೆ ಉಪ್ಪುಂದದಲ್ಲಿ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ಸ್ಥಳದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿ ಮಾಡಿದರು.

ಬೈಂದೂರಿನಲ್ಲಿ ರೂ 228.78 ಕೋಟಿ ವೆಚ್ಚದಲ್ಲಿ ಸರ್ವ ಋತು ಬಂದರು ನಿರ್ಮಾಣ ಮಾಡಲು ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾವುದೇ ಕಂಪನಿ ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಯೋಜನೆಗಳಿಗೆ ಬ್ರೇಕ್‌ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ, ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯ ಸಾಧ್ಯವಾಗುವುದಿಲ್ಲ ಎಂದು ವಿವರಣೆ ನೀಡಿ. ಈ ಯೋಜನೆಗೆ ರೂ 228.78 ಕೋಟಿ ಅವಶ್ಯಕತೆ ಇದ್ದು ಕೇಂದ್ರ ಸರ್ಕಾರ ಖುದ್ದಾಗಿ ಕೈಗೆತ್ತಿಕೊಳ್ಳಬೇಕೆಂದು ವಿನಂತಿಸಿದರು .

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಕೂಡಲೇ ಅನುಮೋದನೆಯನ್ನು ನೀಡುವುದಾಗಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!