spot_img
Tuesday, April 28, 2026
spot_img

ಸುಣ್ಣಾರಿ: ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಗಾರ

kundapura: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಅರ್ಥಶಾಸ್ತ್ರ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇದಿಕೆಯ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಗಾರ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದ ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಯವರು ಅರ್ಥಶಾಸ್ತ್ರ ಪ್ರತಿಯೊಬ್ಬರ ಬದುಕಿನಲ್ಲೂ ಅಗತ್ಯವಾದ ವಿಷಯವಾಗಿದ್ದು ಅದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಪ್ರತಾಪ್‌ಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಕೊಟ್ರಾ ಸ್ವಾಮಿಯವರು ಮಾತುಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಅರ್ಥಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು ಮತ್ತು ಶೇಕಡ 100 ಫಲಿತಾಂಶ ದಾಖಲಿಸಿದ ಉಪನ್ಯಾಸಕರುಗಳನ್ನ ಅಭಿನಂದಿಸಲಾಯಿತು. ಹಾಗೆಯೇ ನಿವೃತ್ತಿ ಗೊಂಡ ಅರ್ಥಶಾಸ್ತ್ರ ಉಪನ್ಯಾಸಕರನ್ನ ಮತ್ತು ಪಿ.ಎಚ್.ಡಿ ಪದವಿ ಪಡೆದ ಅರ್ಥಶಾಸ್ತ್ರ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ಸುಗುಣ, ಅನುರಾಧಾ ಶೆಟ್ಟಿ, ಗಣೇಶ್ ಶೆಟ್ಟಿ, ಅಶೋಕ ನಾಯಕ್ ಸಹಕರಿಸಿದರು. ಗೋಳಿಯಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ದಿನಕರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ವೈದ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀನಿವಾಸ್ ವೈದ್ಯ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!