spot_img
Tuesday, April 28, 2026
spot_img

ಸುರಭಿ ಬೈಂದೂರು: ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ

ಬೈಂದೂರು: ಬೈಂದೂರಿನ ಸಾಂಸ್ಕೃತಿಕ ಸಾಹಿತ್ಯ ಸೇವಾ ಪ್ರತಿಷ್ಠಾನ ಸುರಭಿ ಸಂಸ್ಥೆಯ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೈಂದೂರು ರೋಟರಿ ಭವನದಲ್ಲಿ ಜರುಗಿತು.

2022 ಮತ್ತು 23ನೇ ಸಾಲಿನ ವಾರ್ಷಿಕ ಮಹಾಸಭೆ,ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ 2023-24 ನೇ ಸಾಲಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಹಾಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಇದೇ ಸಂದರ್ಭದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಕೆ.ಕೆ.ಮೂವಿ ಮೇಕರ್ಸ್ ಕುಂದಾಪುರ ಇವರು ನಡೆಸಿದ ಸ್ಪರ್ಧೆಯಲ್ಲಿ ಪುರಸ್ಕೃತರಾದ ಸಂಸ್ಥೆಯ ಬಾಲ ಕಲಾವಿದರುಗಳಾದ ಕುಮಾರಿ ಸಾನ್ವಿ ವಿ.ಎಸ್ ಮತ್ತು ಕುಮಾರಿ ಆದ್ಯ ಇವರನ್ನು ಸಂಸ್ಥೆ ವತಿಯಿಂದ ಗುರುತಿಸಿ ಗೌರವಿಸಿ, ಸನ್ಮಾನಿಸಲಾಯಿತು.

ಸಂಸ್ಥೆಯ ಪದಾಧಿಕಾರಿಗಳಲ್ಲಿ ಓರ್ವರಾದ ಕೊಂಕಣ ರೈಲ್ವೆಯ ಉದ್ಯೋಗಿಯಾಗಿರುವ ಲಕ್ಷ್ಮಣ ಕೊರಗ ಅವರು ಕೊಂಕಣ್ ರೈಲ್ವೆಯ “ಸುರಕ್ಷತಾ ಪ್ರಶಸ್ತಿ” ಪಡೆದುಕೊಂಡಿದ್ದಕ್ಕಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುರಭಿ ಅಧ್ಯಕ್ಷರಾದ ನಾಗರಾಜ ಪಿ.ಯಡ್ತರೆ ವಹಿಸಿದ್ದರು. ಸಂಸ್ಥೆಯ ಸದಸ್ಯರು ಹಿರಿಯರು ಆದ ನಿವೃತ್ತ ಮುಖ್ಯ ಶಿಕ್ಷಕರಾದ ಕೃಷ್ಣಪ್ಪ ಶೆಟ್ಟಿ ಹುಂಚನಿ ಸಂಸ್ಥೆಯ ಕಾರ್ಯ ಚಟುವಟಿಕೆ ಮಾತನಾಡಿ ಶ್ಲಾಘನೆ ವ್ಯಕ್ತಪಡಿಸಿದರು. ಸುರಭಿಯ ಉಪಾಧ್ಯಕ್ಷ ಆನಂದ ಮುದ್ದೋಡಿ ಪ್ರಾಸ್ತಾವಿಕ ಮಾತನಾಡಿ, ನಿರ್ದೇಶಕ ಸುಧಾಕರ್ ಪಿ ಬೈಂದೂರು ಹಾಗೂ ಗಣಪತಿ ಹೋಬಳಿದರ್ ಸಂಸ್ಥೆಯ ಕಾರ್ಯ ಚಟುವಟಿಕೆ ಹಿನ್ನೋಟ-ಮುನ್ನೋಟ ನೀಡಿದರು. ಕಾರ್ಯದರ್ಶಿ ಭಾಸ್ಕರ್ ಬಾಡ ನಿರೂಪಿಸಿ ಉಪಾಧ್ಯಕ್ಷ ಅಬ್ದುಲ್ ರವೂಫ್ ವಂದಿಸಿದರು.
ಅತಿ ಹೆಚ್ಚಿನ ಸಂಖ್ಯೆಯ ಸದಸ್ಯರು ಪದಾಧಿಕಾರಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!