spot_img
Tuesday, April 28, 2026
spot_img

ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು: ನೂತನ ತರಗತಿ ಕೊಠಡಿ ಉದ್ಘಾಟನೆ, ಪ್ರತಿಭಾ ಪುರಸ್ಕಾರ


ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿ ನೂತನ ತರಗತಿ ಕೊಠಡಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

ತರಗತಿ ಕೊಠಡಿ ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶಾಸಕರು, ಶಿಕ್ಷಣಕ್ಕೆ ಅಪಾರ ಶಕ್ತಿ ಇದೆ ಶಿಕ್ಷಕರು ವಿದ್ಯಾರ್ಥಿಗಳು ಊರಿನವರು ಕ್ರಿಯಾಶೀಲರಾದರೆ ಮಾದರಿ ವಿದ್ಯಾರ್ಥಿ ಹಾಗೂ ಮಾದರಿ ಶಾಲೆಯ ನಿರ್ಮಾಣ ಸಾಧ್ಯ ಎಂದರು.

೨೦೨೨-೨೩ನೇ ಸಾಲಿನ ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸಲಾಯಿತು. ವಿಷಯವಾರು ಶಿಕ್ಷಕರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಅಭಿನಂದಿಸಿದರು. ಕಟ್ಟಡ ನಿರ್ಮಾಣದಲ್ಲಿ ಶ್ರಮಿಸಿದ ಅಶೋಕ್ ಶೆಟ್ಟಿ ಹೊಸಂಗಡಿ ಇವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಂಡ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ ಪುತ್ರನ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ, ಶಿವ ಮೊಗವೀರ, ಶ್ರೀಮತಿ ಶ್ಯಾಮಲಾ ದೇವಾಡಿಗ, ಶ್ರೀಮತಿ ರಾಜಶ್ರೀ ನಾಯಕ್, ಶಾಲಾ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸಾಮ್ರಾಟ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಘವೇಂದ್ರ ಶೆಟ್ಟಿ ಕಲ್ಲೋಳಿಮನೆ, ಉದಯ ಸೇರಿಗಾರ್, ಗಣೇಶ ಉಡುಪ, ದಿನೇಶ್ ಆಚಾರ್ಯ ಕಂಡ್ಲೂರು, ವ್ಯವಸಾಯ ಸೇವಾ ಸಹಕಾರಿ ಸಂಘ ಕಾವ್ರಾಡಿ ಇದರ ಅಧ್ಯಕ್ಷರಾದ ಸದಾನಂದ ಬಳ್ಕೂರು, ಸುರೇಶ್ ಭಟ್ ಮುಖ್ಯೋಪಾಧ್ಯಾಯರಾದ ಸುರೇಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸುಧಾಕರ್, ರಾಘವೇಂದ್ರ, ರಿತೇಶ್ ಶೆಟ್ಟಿ ಹಳನಾಡು, ಸುಶಾಂತ ನಾಯಕ್, ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಕಂಡ್ಲೂರು ಇಲ್ಲಿನ ಮುಖ್ಯೋಪಾದ್ಯಾಯರಾದ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!