spot_img
Wednesday, April 29, 2026
spot_img

ಕುಂದಾಪುರ ಡಾ.ಬಿ. ಬಿ. ಹೆಗ್ಡೆ ಕಾಲೇಜು ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್‌ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಪ್ರಾಧ್ಯಾಪಕರನ್ನು ಶ್ಲಾಘಿಸಿದರು.

ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೊಡುಗೆ ಸ್ವೀಕರಿಸಿದ ವಾಣಿಜ್ಯ ಪ್ರಾಧ್ಯಾಪಕಿಯರಾದ ಸುಶ್ಮಿತಾ ಸಾಲಿಗ್ರಾಮ, ಶ್ರೀಮತಿ ಅರ್ಪಣಾ ಶೆಟ್ಟಿ, ಗಣಿತ ಶಾಸ್ತ್ರದ ಪ್ರಾಧ್ಯಾಪಕಿ ಮೇಘನಾ ಹೆಬ್ಬಾರ್ ಮತ್ತು ಭೌತಶಾಸ್ತ್ರ ಪ್ರಾಧ್ಯಾಪಕಿ ಶ್ರೀಮತಿ ಸೌಮ್ಯ ಗಾಣಿಗ ಸಂಸ್ಥೆಯಲ್ಲಿನ ತಮ್ಮ ಸೇವಾನುಭವನ್ನು ಹಂಚಿಕೊಂಡರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಹಾಗೂ ರಸಾಯನಶಾಸ್ತ್ರ ಪ್ರಾಧ್ಯಾಪಕಿ ಶ್ರೀಮತಿ ರಕ್ಷಿತಾ ಶೆಟ್ಟಿ ಅನಿಸಿಕೆ ಹಂಚಿಕೊಂಡರು.

ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕಿ ನಿರ್ಮಲಾ ಪ್ರಾರ್ಥಿಸಿ, ಸಿಬ್ಬಂದಿ ಸಂಘದ ಸಂಯೋಜಕ ಮಹೇಶ್ ನಾಯ್ಕ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!