spot_img
Wednesday, January 22, 2025
spot_img

ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇಲೆ ಕಲ್ಪಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಪ್ರಕೃತಿ ಸೌಂದರ್ಯ, ಧಾರ್ಮಿಕ ಕೇಂದ್ರಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ ಇಲ್ಲಿನ ಪ್ರವಾಸಿತಾಣಗಳ ಅಭಿವೃಧ್ದಿಗೆ ಹೆಚ್ಚಿನ ಒತ್ತು ನೀಡಬೇಕು ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ, ವಾಹನಗಳ ಪಾರ್ಕಿಂಗ್, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ ಪ್ರವಾಸಿ ಮಿತ್ರರನ್ನು ನಿಯೋಜಿಸಿ ಅಪಘಾತಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.

ಹೊರಗಿನಿಂದ ಬರುವ ಪ್ರವಾಸಿಗರು ಹೆಚ್ಚಾಗಿ ಮಲ್ಪೆ, ಕಾಪು, ಮರವಂತೆ ಬೀಚ್ ಗಳಿಗೆ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಿರುತ್ತದೆ. ಇದಲ್ಲದೇ ಇನ್ನೂ ಅನೇಕ ಕಡಲತೀರಗಳು ಸುಂದರವಾಧ ಪ್ರಕೃತಿ ಸೌಂದರ್ಯ ಹೊಂದಿವೆ ಇವುಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಜನರು ಭೇಟಿ ನೀಡುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ದಿಯಿಂದ ಸ್ಥಳಿಯ ಜನರಿಗೆ ಉದ್ಯೋಗವಕಾಶ ಕಲ್ಪಸುವುದರ ಜೊತೆಗೆ ಆರ್ಥಿಕ ಸ್ವಾವಲಂಬಿಗಳಾಗಲು ಸಹಾಯವಾಗುತ್ತದೆ ,ಜಿಲ್ಲೆಯಲ್ಲಿ ಈಗಾಗಲೇ ೪೮ ಪ್ರವಾಸಿ ತಾಣಗಳೆಂದು ಗುರುತಿಸಲಾಗಿದೆ. ಇನ್ನೂ ೩೨ ಪ್ರವಾಸಿ ತಾಣಗಳು ಹೊಸದಾಗಿ ಸೇರ್ಪಡೆಗೊಳಿಸಿ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಪ್ರವಾಸಿ ತಾಣಗಳ ಅಭಿವೃಧ್ದಿಗೆ ಸರ್ಕಾರ ನೀಡಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು, ಒಂದೊಮ್ಮೆ ಅನುದಾನದ ಕೊರತೆಯಾದಲ್ಲಿ ಸರ್ಕಾರದಿಂದ ಮಂಜೂರು ಮಾಡಿಸಿಕೊಡುವುದಾಗಿ ತಿಳಿಸಿದರು.

ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗನ್ನು ಒಳಗೊಂಡ ಕಾಮಗಾರಿಗಳನ್ನು ಕೈಗೊಳ್ಳಲು ಸಿ‌ಆರ್‌ಜಡ್ ನಿಂದ ನಿರಾಕ್ಷೇಪಣಾ ಪತ್ರವನ್ನು ಶೀಘ್ರದಲ್ಲಿಯೇ ಪಡೆದು ಪೂರ್ಣಗೊಳಿಸಬೇಕು. ಪಕ್ಕದ ರಾಜ್ಯ ಗೋವಾದಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಜನಾಕರ್ಷಣೆಯಗಿದೆ ಆದರೆ ನಮ್ಮ ಜಿಲ್ಲೆಯಲ್ಲಿ ಉತ್ತಮ ಕಡಲತೀರಗಳಿದ್ದರೂ ಹೆಚ್ಚು ಪ್ರಚಲಿತವಾಗಿರುವುದಿಲ್ಲ. ಜನಾಕರ್ಷಣೀಯ ಜಲ ಸಾಹಸ ಕ್ರೀಡೆಗಳು ಸೇರಿದಂತೆ ಮತ್ತಿತರ ಪ್ರವಾಸಿ ಚಟುವಟಿಕೆಗಳನ್ನು ಅಭಿವೃಧ್ದಿಪಡಿಸಬೇಕು ಎಂದರು.

ಪ್ರಸಾದ್ ಯೋಜನೆಯಡಿಯಲ್ಲಿ ವಿವಿಧ ಧಾರ್ಮಿಕ ಹೆರಿಟೇಜ್ ಸ್ಥಳಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯ ಒದಗಿಸುವ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ , ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!