Sunday, September 8, 2024

ಕುಂದಾಪುರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ


ಕುಂದಾಪುರ: ಮಹಾತ್ಮಾ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರೀ, ವೀರ ಸಾವರ್ಕರ್, ಆಜಾದ್ ಅವರಂತಹ ಅನೇಕ ಮಂದಿ ಮಹನೀಯರ ಹೋರಾಟ, ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಕುಂದಾಪುರದಲ್ಲೂ ಸಾಕಷ್ಟು ಮಂದಿ ಹಿರಿಯರು ಈ ಹೋರಾಟದಲ್ಲಿ ಭಾಗವಹಿಸಿದ್ದು, ಅವರೆಲ್ಲರ ತ್ಯಾಗ, ಪರಿಶ್ರಮವನ್ನು ನಾವಿಂದು ನೆನೆಯಬೇಕಿದೆ. ಪ್ರತಿಯೊಬ್ಬ ಪ್ರಜೆಯು ಒಳ್ಳೆಯ ಕೆಲಸವನ್ನು ಮಾಡುವ ಮೂಲಕ, ನಮ್ಮ ಕರ್ತವ್ಯ ಪ್ರಜ್ಞೆಯನ್ನು ಮೆರೆದರೆ, ಅದುವೇ ದೇಶದ ಪ್ರಗತಿಗೆ ದಾರಿದೀಪವಾಗಲಿದೆ ಎಂದು ಶಾಸಕ ಎ.ಕಿರಣ್ ಕೊಡ್ಗಿ ಹೇಳಿದರು.

ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಮಂಗಳವಾರ ನಡೆದ 77ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್ ಶಾಂತಿ, ಅಹಿಂಸೆಯಿಂದ ಸ್ವಾತಂತ್ರ್ಯ ದೊರಕಿದ್ದು, ಅದನ್ನು ದಿನನಿತ್ಯದ ಚಟುವಟಿಕೆಯಲ್ಲಿಯೂ ಅಳವಡಿಸಿಕೊಂಡರೆ ಸುಂದರ ಭಾರತ ನಿರ್ಮಾಣ ಸಾಧ್ಯ. ಆರ್ಥಿಕ, ಶೈಕ್ಷಣಿಕ, ವೈಜ್ಞಾನಿಕ, ಕ್ರೀಡೆ ಹೀಗೆ ಎಲ್ಲದರಲ್ಲೂ ದೇಶ ಮುಂಚೂಣಿಯಲ್ಲಿದೆ. ದೇಶದ ಏಳ್ಗೆಗೆಗೆ ನಮ್ಮಿಂದ ಏನು ಕೊಡುಗೆ ಕೊಡಲು ಸಾಧ್ಯ ಎನ್ನುವ ಮನೋಭಾವವಿರಲಿ ಎಂದರು.

ಸಾಧಕರಿಗೆ ಸಮ್ಮಾನ:
೨೦೨೨-೨೩ ನೇ ಸಾಲಿನ sslcಯಲ್ಲಿ ತಾಲೂಕಿಗೆ ಗರಿಷ್ಠ ಅಂಕ ಪಡೆದ ಶ್ರೀ ವೆಂಕಟರಮಣ ಆ. ಮಾ. ಶಾಲೆಯ ಲಹರಿ, ವಿ.ಕೆ. ಆರ್. ಆ. ಮಾ. ಶಾಲೆಯ ಪ್ರಥಮ್ ಆರ್. ತಾಳಿಕೋಟೆ, ಕೊರಗ ವಿದ್ಯಾರ್ಥಿ ಬಿದ್ಕಲ್‌ಕಟ್ಟೆ ಕೆಪಿ‌ಎಸ್ ಶಾಲೆಯ ಸುಜಯ್ ಅವರನ್ನು ಸಮ್ಮಾನಿಸಲಾಯಿತು.

ಪುರಸಭಾ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರು, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಡಿವೈ‌ಎಸ್‌ಪಿ ಬೆಳ್ಳಿಯಪ್ಪ ಕೆ.ಯು., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ಸಮಾಜ ಕಲ್ಯಾಣಾ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುರಾಧ ಹಾದಿಮನೆ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತಾ ಎಂ. ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಶೋಭಾ ಶೆಟ್ಟಿ ಸ್ವಾಗತಿಸಿ, ತಾಲೂಕು ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಕುಸುಮಾಕರ್ ಶೆಟ್ಟಿ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್‍ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!