spot_img
Monday, June 15, 2026
spot_img

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಸ್ವಾತಂತ್ರ್ಯೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿ ಡಿಸಿಸಿ ಬ್ಯಾಂಕ್ ) ನಲ್ಲಿ 76ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಕೊಡಿಯಾಲ್ ಬೈಲ್ ನಲ್ಲಿರುವ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ದಿನ ಶಾಂತಿ , ಏಕತೆ ಮತ್ತು ಧೈರ್ಯವನ್ನು ಪ್ರತಿಬಿಂಬಿಸುವ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಆಕಾಶದೆತ್ತರದಲ್ಲಿ ಹಾರುತ್ತದೆ. ಇಂತಹ ಸ್ಮರಣೀಯ ಪರ್ವ ಕಾಲದಲ್ಲಿ ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದರ ಜೊತೆಗೆ ನಾವೆಲ್ಲರೂ ದೇಶದ ಏಕತೆ ಹಾಗೂ ಅಖಂಡತೆಯನ್ನು ಉಳಿಸಲು ಪಣ ತೊಡಬೇಕು. ಪ್ರೀತಿ, ಸಹೋದರತೆ ಮತ್ತು ಒಗ್ಗಟ್ಟಿನಿಂದ ಸಿಬ್ಬಂದಿಗಳು ಬ್ಯಾಂಕಿನ ಕಾರ್ಯದಲ್ಲೂ ಸಂಘಟನಾತ್ಮಕವಾಗಿ ದುಡಿದು ಬ್ಯಾಂಕನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸ ಬೇಕೆಂದರು.

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಜೈರಾಜ್ ಬಿ. ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಅಶೋಕ್ ಕುಮಾರ್ ಹಾಗೂ ಬ್ಯಾಂಕಿನ ಹಿರಿಯ – ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ ಧ್ವಜ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!