Sunday, September 8, 2024

ಹೆಸಕುತ್ತೂರು ಪ್ರಾಥಮಿಕ ಶಾಲೆ: ಯೋಧರೊಂದಿಗೆ ಸಂವಾದ

ಕುಂದಾಪುರ: ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ಯೋಧರೊಂದಿಗೆ ಸಂವಾದ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಭಾರತೀಯ ಸೇನೆಯ ನಿವೃತ್ತ ಯೋಧ ಮಂಜು ಮೊಗವೀರ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು ಆ ನಂತರ ಶಾಲಾ ವಿದ್ಯಾರ್ಥಿಗಳು ಯೋಧರೊಂದಿಗೆ ಸಂವಾದ ನಡೆಸಿದರು. ಭಾರತೀಯ ಸೇನೆಗೆ ಸೇರುವ ಆಯ್ಕೆ ಪ್ರಕ್ರಿಯೆ, ಸೇನೆಯಲ್ಲಿರುವ ಅವಕಾಶಗಳು, ಅಲ್ಲಿ ನೀಡುವ ತರಬೇತಿ, ದಿನಚರಿ, ಆಹಾರ ಕ್ರಮ, ಅಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸುವ ರೀತಿ, ಸೇನೆಗೆ ಸೇರುವ ಯುವಕರಿಗೆ ಸೇವೆಯಲ್ಲಿರುವಾಗ, ಸೇವೆಯಿಂದ ನಿವೃತ್ತ ರಾದ ನಂತರ ಸರಕಾರದಿಂದ ದೊರೆಯುವ ಪ್ರೋತ್ಸಾಹ ಹಾಗೂ ಸವಲತ್ತುಗಳು, ಈ ನಿಟ್ಟಿನಲ್ಲಿ ಪೋಷಕರಿಗೆ ಕಿವಿಮಾತು ಹೀಗೆ ವಿದ್ಯಾರ್ಥಿಗಳು ಕೇಳಿದ ವಿವಿಧ ರೀತಿಯ ಪ್ರಶ್ನೆಗಳಿಗೆ ಸಾವಧಾನದಿಂದ, ಸವಿವರವಾಗಿ ಉತ್ತರಿಸಿದರು. ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಯುವಕರಿಗೆ ಪ್ರೇರಣದಾಯಕವಾಗಿ, ಮಾಹಿತಿಪೂರ್ಣವಾಗಿ ಈ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು.

ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಶೆಟ್ಟಿ ಕೆ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಹಿರಿಯ ದಾನಿಗಳಾದ ಕೊರಗಯ್ಯ ಶೆಟ್ಟಿ, ಕೊರ್ಗಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಶೆಟ್ಟಿ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಶಾಲಾ ದೈಹಿಕ ಶಿಕ್ಷಕರಾದ ಸಂಜೀವ ಎಂ, ಸಹಶಿಕ್ಷಕರಾದ ಜಯಲಕ್ಷ್ಮಿ ಬಿ, ಜಯರಾಮ ಶೆಟ್ಟಿ, ವಿಜಯಾ ಆರ್, ರವೀಂದ್ರ ನಾಯಕ, ಗೌರವ ಶಿಕ್ಷಕಿ ಮಧುರ, ಅಂಗನವಾಡಿ ಶಿಕ್ಷಕಿ ಪ್ರಮೀಳಾ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ವಿಜಯ ಶೆಟ್ಟಿ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!