spot_img
Wednesday, April 29, 2026
spot_img

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 17ನೇ ಬಾರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

mangaluru: ರಾಷ್ಟ್ರ ಮಟ್ಟದ ಎನ್.ಸಿ.ಡಿ.ಸಿ. ಪ್ರಶಸ್ತಿಯನ್ನು 2 ಬಾರಿ, ರಾಜ್ಯ ಮಟ್ಟದ ಪ್ರಶಸ್ತಿಗಳನ್ನು 7 ಬಾರಿ ಪಡೆದಿರುವ ಉಡುಪಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ದಿನಾಂಕ 19-08-2023ರಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 17ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ 2022-23 ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಮ್. ಎನ್. ರಾಜೇಂದ್ರ ಕುಮಾರ್‌ರವರಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಟಿಯ ಅಧ್ಯಕ್ಷರಾದ ಸಂಜೀವ ಕಾಂಚನ್, ಉಪಾಧ್ಯಕ್ಷರಾದ ಎಲ್. ಉಮಾನಾಥ್, ನಿರ್ದೇಶಕರಾದ ವಿನಯ ಕುಮಾರ್ ಟಿ.ಎ, ಪ್ರಧಾನ ವ್ಯವಸ್ಥಾಪಕ(ಪ್ರ.)ರಾದ ರಾಜೇಶ್ ವಿ. ಶೇರಿಗಾರ್‌ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರ)ಯಾದ ಗೋಪಾಲಕೃಷ್ಣ ಭಟ್ ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ಧರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!