spot_img
Wednesday, April 29, 2026
spot_img

ಬಸ್ರೂರು ಗ್ರಾ.ಪಂ. ಅಧ್ಯಕ್ಷರಾಗಿ ದಿನಕರ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಗಿರಥಿ ಆಯ್ಕೆ


ಕುಂದಾಪುರ :ಬಸ್ರೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ದಿನಕರ ಶೆಟ್ಟಿ, ಕಾಂಗ್ರೆಸ್ ಬೆಂಬಲತರಾಗಿ ಗಿರಿಜಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಇಲ್ಲಿ ಒಟ್ಟು 17 ಸ್ಥಾನವಿದ್ದು, ಬಿಜೆಪಿ 11, ಕಾಂಗ್ರೆಸ್ 5, ಸಿಪಿ‌ಐ‌ಎಂ 1 ಬೆಂಬಲಿತದ್ದಾರೆ. ಚುನಾವಣೆಯಲ್ಲಿ 11 ಮತಗಳನ್ನು ಪಡೆದರು. ಗಿರಿಜಾ ಶೆಟ್ಟಿ 5 ಮತ ಪಡೆದರು. 1 ಮತ ಅಸಿಂಧುವಾಯಿತು.

ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಭಾಗಿರಥಿ ಆಯ್ಕೆಯಾದರು.

ಬಸ್ರೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಹಿಂ.ವ.ಬ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂ.ವ.ಅ.-ಮ ಸ್ಥಾನಕ್ಕೆ ಮೀಸಲಾಗಿತ್ತು. ಚುನಾವನಾಧಿಕಾರಿಯಾಗಿ ಕುಂದಾಪುರ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ ಎಮ್, ಕರ್ತವ್ಯ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!