Sunday, September 8, 2024

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರ್ಮಾಣ ಕಾರ್ಮಿಕರ ಸಂಘಟನೆಯಿಂದ ಗಂಗೊಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ

ಗಂಗೊಳ್ಳಿ : ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನ ಬಿಡುಗಡೆ, ಪಿಂಚಣಿ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ವತಿಯಿಂದ ಕಾರ್ಮಿಕರು ಗಂಗೊಳ್ಳಿ ಗ್ರಾಮ ಪಂಚಾಯತ್ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕದ ಅಧ್ಯಕ್ಷ ಚಿಕ್ಕ ಮೊಗವೀರ, ಕಳೆದ ಎರಡು ವರ್ಷಗಳಿಂದ ಸರಕಾರ ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ. ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು. ಭವಿಷ್ಯ ನಿಧಿ ಜಾರಿಗೊಳಿಸುವುದು ಸೇರಿದಂತೆ ಅನೇಕ ಬೇಡಿಕೆಗಳಿಗೆ ಸರಕಾರ ಈವರೆಗೆ ಸ್ಪಂದಿಸಿಲ್ಲ. ಹೀಗಾಗಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸರಕಾರ ಕಾರ್ಮಿಕರ ಹೋರಾಟ ಮತ್ತು ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮನವಿಯನ್ನು ಗ್ರಾಮ ಪಂಚಾಯತ್ ಮೂಲಕ ಸಲ್ಲಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯ ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ರಾಘವೇಂದ್ರ ಪೈ ಮತ್ತು ಅಭಿವೃದ್ಧಿ ಅಧಿಕಾರಿ ಉಮಾಶಂಕರ ಈ ಸಂದರ್ಭ ಉಪಸ್ಥಿತರಿದ್ದರು.
ಪ್ರತಿಭಟನೆಗೂ ಮುನ್ನ ಗಂಗೊಳ್ಳಿ ಪೋಸ್ಟ್ ಆಫೀಸಿನ ಬಳಿಯಿಂದ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕದ ಕಾರ್ಯದರ್ಶಿ ಅರುಣ್ ಕುಮಾರ್, ಉಪಾಧ್ಯಕ್ಷ ಆನಂದ ಎನ್.ಕೆ., ಜತೆ ಕಾರ್ಯದರ್ಶಿ ಗಿರಿಜಾ ಪೂಜಾರಿ, ಖಜಾಂಚಿ ಅಭಿನಂದನ್, ಸಂಘದ ಪದಾಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!