spot_img
Wednesday, April 29, 2026
spot_img

ಆಲೂರು ಹರ್ಕೂರು ವ್ಯ.ಸೇ.ಸ.ಸಂಘದ ವತಿಯಿಂದ ಗ್ರಾ.ಪಂ. ಅಧ್ಯಕ್ಷ ರಾಜೇಶ ದೇವಾಡಿಗರಿಗೆ ಅಭಿನಂದನೆ


ಕುಂದಾಪುರ: ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ದೇವಾಡಿಗರನ್ನು ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಕಛೇರಿಯಲ್ಲಿ ಅಭಿನಂದಿಸಲಾಯಿತು.

ಸಂಘದ ಸದಸ್ಯರಾಗಿ, ಪ್ರಸ್ತುತ ಆಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ರಾಜೇಶ ದೇವಾಡಿಗರನ್ನು ಅಭಿನಂದಿಸಿ ಮಾತನಾಡಿದ ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್.ಮಂಜಯ್ಯ ಶೆಟ್ಟಿ, ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ಉತ್ಸಾಹಿ ರಾಜೇಶ ಅವರಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗುವ ಅವಕಾಶ ಲಭಿಸಿದೆ. ಗ್ರಾಮೀಣಾಭಿವೃದ್ದಿಯ ಕಾರ್ಯದಲ್ಲಿ ಅವರು ಯಶಸ್ಸು ಸಾಧಿಸಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವರಾಮ ಯಡ್ತರೆ, ವ್ಯವಸ್ಥಾಪಕ ಸಂಜೀವ ಪೂಜಾರಿ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!