spot_img
Wednesday, April 29, 2026
spot_img

ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೀತಾ ಅವಿನಾಶ್, ಉಪಾಧ್ಯಕ್ಷರಾಗಿ ಗೋವರ್ಧನ್ ಜೋಗಿ ಆಯ್ಕೆ


ವಂಡ್ಸೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾಗಿ ಗೋವರ್ಧನ್ ಜೋಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಂಡ್ಸೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ನಡೆಯಿತು. ಚುನಾವಣಾಧಿಕಾರಿಯಾಗಿ ವಾರಾಹಿ ಜಲಾಶಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಪಡ್ತಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರೇಣುಕಾ ಹೆಗ್ಡೆ ಸಹಕರಿಸಿದರು.

ಇಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಬಂದಿತ್ತು. ವಂಡ್ಸೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 7 ಸದಸ್ಯ ಸ್ಥಾನವಿದ್ದು ಕಾಂಗ್ರೆಸ್ ಬೆಂಬಲಿತ 5, ಬಿಜೆಪಿ ಬೆಂಬಲಿತ 2 ಸದಸ್ಯರಿದ್ದಾರೆ.

ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಸಂಜೀವ ಪೂಜಾರಿ, ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಸಂಜೀವ ಶೆಟ್ಟಿ ಸಂಪಿಗೇಡಿ, ಪ್ರಸನ್ನಕುಮಾರ್ ಶೆಟ್ಟಿ, ಉದಯ ಪೂಜಾರಿ ಚಿತ್ತೂರು, ದೀಪಕ್ ಕುಮಾರ್ ಶೆಟ್ಟಿ, ಗ್ರಾ.ಪಂ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗೀತಾ ಅವಿನಾಶ್ ಈ ಹಿಂದೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಗೋವರ್ಧನ್ ಜೋಗಿ ಅವರು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಜೇಸಿ‌ಐ ಚಿತ್ತೂರು ಮಾರಣಕಟ್ಟೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!