spot_img
Wednesday, April 29, 2026
spot_img

ಧರ್ಮಸ್ಥಳ ಧರ್ಮಾಧಿಕಾರಿಗಳ ತೇಜೋವಧೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹ

ಕುಂದಾಪುರ: ಆ.25ರಂದು ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆದ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವ್ಯಯುಕ್ತಿಕ ತೇಜೋವಧೆ ಮಾಡಿರುವುದು ತೀರಾ ಖಂಡನೀಯವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ ಕೃತ್ಯವಾಗಿದೆ ಹಾಗೂ ಆಧಾರರಹಿತವಾಗಿ ವೈಯುಕ್ತಿಕ ನಿಂದನೆ, ಧಾರ್ಮಿಕ ನಿಂದನೆ ಕಾನೂನಾತ್ಮಕವಾಗಿ ಅಪರಾಧವಾಗಿದೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಈ ಸಭೆಯಲ್ಲಿ ವೀರೇಂದ್ರ ಹೆಗ್ಗಡೆಯವರು ಹಾಗೂ ಧರ್ಮಸ್ಥಳದ ಬಗ್ಗೆ ಯಾವುದೇ ಅವಮಾನಕರ ಮತ್ತು ತೇಜೋವಧೆ ಮಾತುಗಳನ್ನಾಡದಂತೆ ನಿಬಂಧಿಸಬೇಕೆಂದು ಉಡುಪಿ ಜಿಲ್ಲಾ ಸುಪರಿಟೆಂಡೆಂಟ್ ಆಫ್ ಪೊಲೀಸ್ ಇವರಿಗೆ ಕುಂದಾಪುರ ಡಿ ವೈ ಎಸ್ ಪಿ ಬೆಳ್ಳಿಯಪ್ಪ ಮೂಲಕ ಮನವಿ ನೀಡಿದಾಗಲು ಈ ಸಭೆಯಲ್ಲಿ ಪ್ರಚೋದನಕಾರಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಲು ಪೋಲಿಸ್ ಇಲಾಖೆ ಅವಕಾಶ ನೀಡಿರುವುದನ್ನು ತೀವೃವಾಗಿ ಖಂಡಿಸುತ್ತೇವೆ. ಯಾವುದೇ ರೀತಿಯಲ್ಲಿ ಕ್ಷೇತ್ರದ ವಿರುದ್ಧ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಕರ್ನಾಟಕ ಘನ ನ್ಯಾಯಾಲಯವು ನೀಡಿರುವ ಪ್ರತಿಬಂಧಕಾಜ್ಞೆಯನ್ನು ನೀಡಲಾಗಿದ್ದರೂ ಸಹ ಅದೇ ಪ್ರವೃತ್ತಿಯನ್ನು ಮುಂದುವರೆಸಿರುವ ಇವರು ನ್ಯಾಯಾಲಯದ ನಿಂದನೆ ಮಾಡಿದ್ದಾರೆ.

ಶ್ರೀಮತಿ ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಪ್ರಚೋದನಕಾರಿ ಮಾತುಗಳನ್ನಾಡಲು ಅವಕಾಶ ಮಾಡಿಕೊಟ್ಟಿರುವುದು ಕಾನೂನು ಬಾಹಿರವಾಗಿದೆ. ಬಹಿರಂಗ ಸಭೆಯಲ್ಲಿ ಮಾತನಾಡಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಕಾನೂನು ಕ್ರಮ ಕೈಗೊಳ್ಳದೆ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರ ಕಾನೂನು ಬಾಹಿರ ಕೃತ್ಯಕ್ಕೆ ಉಗ್ರ ಪ್ರತಿಭಟನೆ ಮಾಡುವ ಹಕ್ಕು ಶ್ರೀ ಕ್ಷೇತ್ರದ ಅಭಿಮಾನಿಗಳಾದ ನಮಗಿರುತ್ತದೆ.

ಸನಾತನ ಧರ್ಮದ ಹೆಸರಿನಲ್ಲಿ ತಪ್ಪು ಮಾಹಿತಿ ನೀಡುತ್ತಾ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇವರ ಆಶಯಗಳು ಧರ್ಮ ಶ್ರದ್ಧೆಯ ವಿರುದ್ಧವಾಗೇ ಇವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ವಿನಂತಿಸುತ್ತೇವೆ. ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿರವರ ಹೇಳಿಕೆಗಳು ಎಲ್ಲವೂ ಪೂರ್ವಾಗ್ರಹ ಪೀಡಿತ, ಕಪೋಲ ಕಲ್ಪಿತ ಮತ್ತು ದ್ವೇಷದ ಹೇಳಿಕೆಗಳಾಗಿವೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಕ್ಷೇತ್ರದ ಅಭಿಮಾನಿಗಳ ಪರವಾಗಿ ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಜಿಲ್ಲಾ ಜನ ಜಾಗೃತಿ ವೇದಿಕೆಯ ಪರವಾಗಿ ರಟ್ಟಾಡಿ ನವೀನ್‌ಚಂದ್ರ ಶೆಟ್ಟಿ, ಪ್ರಗತಿ ಬಂಧು- ಸ್ವ ಸಹಾಯ ಸಂಘಗಳ ಒಕ್ಕೂಟದ ಪರವಾಗಿ ಗೀತಾಂಬ, ಚಂದ್ರಾವತಿ ಮತ್ತು ಪ್ರದೀಪ್ ಮಡಿವಾಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಕುಂದಾಪುರ ಇವರು ಪೊಲೀಸ್ ಇಲಾಖೆಗೆ ದೂರು ನೀಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!