spot_img
Wednesday, April 29, 2026
spot_img

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನಾ ಕಾರ್ಯಕ್ರಮಕ್ಕೆ ಆಹ್ವಾನ

ಕುಂದಾಪುರ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬ ದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಕರ್ನಾಟಕದ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೋಂದಣಿ ಯಾಗಿರುವ ಫಲಾನುಭೂಮಿಗಳಿಗೆ ದಿನಾಂಕ: 30-08-2023 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಲಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭೂಮಿಗಳು, ಸಾರ್ವಜನಿಕರು ,ಭಾಗಿಯಾಗಲು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವ್ಯಾಪ್ತಿಯ ವಾರ್ಡ್ ಹಂತದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಟಿ.ವಿ/ ಎಲ್.ಇ.ಡಿ ಪರದೇ ವ್ಯವಸ್ಥಗೊಳಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭೂಮಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಜರಾಗಬೇಕೆಂದು ವಿನಂತಿಸಲಾಗಿದೆ.

ಫಲಾನುಭೂಮಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೋಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣ ಮಾಡಿಕೊಂಡಿರುವ ಮೊಬೈಲ್ ಪೋನ್ ನೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!