spot_img
Wednesday, April 29, 2026
spot_img

ಆಗಸ್ಟ್ 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 31 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂ ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೆಗೌಡ ಹಾಗೂ ಡಾ.ತೇಜಸ್ವಿನಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹಾಗೂ ಮತ್ತಿತರರು ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್ ಉಪನ್ಯಾಸ ನೀಡಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!