spot_img
Wednesday, April 29, 2026
spot_img

ಬಿಲ್ಲವರ ಹಿತರಕ್ಷಣಾ ವೇದಿಕೆಯಿಂದ ನಾರಾಯಣ ಗುರುಗಳ ಜನ್ಮ ದಿನಾಚರಣೆ

ಗಂಗೊಳ್ಳಿ : ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು.

ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ    ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು  ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷ ವೆಂಕಟೇಶ ಪೂಜಾರಿ ಕೊಡೇರಿ ಮನೆ, ಕಾರ್ಯದರ್ಶಿ  ಜಿ. ಆರ್ ಲಕ್ಷ್ಮಣ, ಜೊತೆ ಕಾರ್ಯದರ್ಶಿ ಗಣೇಶ ಪೂಜಾರಿ, ಖಜಾಂಜಿ ಮಂಜುನಾಥ, ಸಂಸ್ಥೆಯ ಸಲಹೆಗಾರರಾದ ಮುತ್ತ ಕುಂದರ್, ಸದಸ್ಯರಾದ ಸುಧಾಕರ ಪೂಜಾರಿ, ಆನಂದ ಬಿಲ್ಲವ ರಾಮಚಂದ್ರ ಪೂಜಾರಿ ಶಂಕರ ಪೂಜಾರಿ ಮತ್ತು ಆನಂದ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!