spot_img
Wednesday, April 29, 2026
spot_img

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ‘ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ’ ಪ್ರಶಸ್ತಿ


ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಉಡುಪಿ ಜಿಲ್ಲೆ (ಎಸ್ಡಿ‌ಎಂಸಿ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ) ಕೊಡಮಾಡುವ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ.

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆ.10ರಂದು ಕೊಟೇಶ್ವರದ ಸರಸ್ವತೀ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ತಾಲೂಕು ಕಾನೂನು ಸೇವಾ ಸಮಿತಿ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ನ್ಯಾಯಾಧೀಶರು ಭಾಗವಹಿಸಿ ಪ್ರಶಸ್ತಿ ಪ್ರಧಾನಿಸಲಿದ್ದಾರೆ. ಶಿಕ್ಷಣ ತಜ್ಞ ಡಾ.ವಿ.ಪಿ. ನಿರಂಜನ ಆರಾಧ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಸಮನ್ವಯ ವೇದಿಕೆ ಪದಾಧಿಕಾರಿಗಳು, ಶಿಕ್ಷಣಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶೂನ್ಯ ಶಿಕ್ಷಕರಿರುವ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆಯ ಸಿ‌ಆರ್ಪಿಯವರನ್ನು ಗುರುತಿಸಿ ಉತ್ತಮ ಸಿ.ಆರ್.ಪಿ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ನಿವೃತ್ತರಾದರೂ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕ ನಡೂರು ವಿಶ್ವನಾಥ ಶೆಟ್ಟಿಯವರಿಗೆ ಗುರುವಂದನೆ ಸಲ್ಲಿಸಲಾಗುವುದು.

ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಸಾಧಕ ಪ್ರಶಸ್ತಿಯನ್ನು ಅಮಾಸೆಬೈಲು ಪರಿಸರದ ಶಾಲೆಗಳ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿರುವ ಶಂಕರ ಐತಾಳ ಅಮಾಸೆಬೈಲು ಇವರಿಗೆ ನೀಡಲಾಗುವುದು ಎಂದು ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!