spot_img
Wednesday, April 29, 2026
spot_img

ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಕೇಂದ್ರದ ವಿದ್ಯಾರ್ಥಿಗಳ ಅವಿಸ್ಮರಣೀಯ ಸಮಾವೇಶ


kundapura: ಕಳೆದ ಐವತ್ತು ವರ್ಷಗಳಿಂದ ಯಕ್ಷಗಾನ ಕ್ಷೇತ್ರಕ್ಕೆ ಸುಮಾರು 3000 ಕಲಾವಿದರನ್ನು ಅರ್ಪಿಸಿದ ಸಂಸ್ಥೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ. ಉಡುಪಿ ಜಿಲ್ಲೆಯ ಕೋಟದ ಹಿರೇಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1972ರಲ್ಲಿ ಪ್ರಾರಂಭವಾದ ಸಂಸ್ಥೆಯು ಇದೀಗ ಸಾಲಿಗ್ರಾಮದ ಗುಂಡಿಯಲ್ಲಿ ಸ್ವಂತ ಕಟ್ಟಡವನ್ನು ಹೊಂದಿದ್ದು ಇಲ್ಲಿ ನಿರಂತರವಾಗಿ ಉಚಿತ ಯಕ್ಷಗಾನ ತರಗತಿ ನಡೆಯುತ್ತಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯ ಐರೋಡಿ ಸದಾನಂದ ಹೆಬ್ಬಾರರು ಸ್ಥಾಪಿಸಿದ, ಶ್ರೇಷ್ಠ ಪ್ರಾಚಾರ್ಯರೆನಿಸಿಕೊಂಡ ನಾರ್ಣಪ್ಪ ಉಪ್ಪೂರರ ಗುರುತನದಲ್ಲಿ ನಡೆದ ಈ ಶಾಲೆಯ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾವೇಶವನ್ನು ಸೆಪ್ಟೆಂಬರ್ 2 ಮತ್ತು 3 ರಂದು ಸಾಲಿಗ್ರಾಮದ ಸದಾನಂದ ರಂಗಮಂಟಪದಲ್ಲಿ ಏರ್ಪಡಿಸಲಾಗಿದೆ.

ವಿದ್ಯಾರ್ಥಿಗಳೇ ಆಯೋಜಿಸುತ್ತಿರುವ ಈ ಸಮಾವೇಶದಲ್ಲಿ ವಿದ್ಯಾರ್ಥಿಗಳಿಂದಲೆ ತಾಳಮದ್ದಲೆ, ಯಕ್ಷಗಾನ, ಗಾನಾಮೃತ, ಯಕ್ಷಸಂಜೀವ ಯಕ್ಷಗಾನ ಕೇಂದ್ರದಿಂದ ಪೂರ್ವರಂಗ ಪ್ರಾತ್ಯಕ್ಷಿಕೆ, ವಿದ್ಯಾರ್ಥಿಗಳ ಅವಿಸ್ಮರಣೀಯ ನೆನಪುಗಳ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!