spot_img
Wednesday, April 29, 2026
spot_img

‘ಆಸರೆ’ ಹಾಗು ‘ನವಚೇತನ’ ಪ್ರೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ಆಸರೆ ಪೋತ್ಸಾಹಧನ ಹಾಗೂ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ನವಚೇತನ ಪ್ರೋತ್ಸಾಹಧನದ ಸಮಿತಿಯ ಸಂಚಾಲಕರಾಗಿ ಕುಂದಾಪುರದ ಖ್ಯಾತ ನಿರೂಪಕ ಹಾಗು ಸಿಪ್ಲಾ ಕಂಪನಿಯಲ್ಲಿ ಏರಿಯಾ ಬ್ಯುಸ್ನೆಸ್ ಮ್ಯಾನೇಜರ್ ಆಗಿರುವ ಸಂದೇಶ್ ಶೆಟ್ಟಿ ಸಳ್ವಾಡಿಯವರು ಆಯ್ಕೆಯಾಗಿದ್ದಾರೆ.

ಇವರು ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ತಮ್ಮ ಸಾಮಾಜಿಕ ಸೇವೆಯನ್ನು ಆರಂಭಿಸಿ, ಕಳೆದ ೧೧ ವರ್ಷಗಳಿಂದ ಪ್ರತಿಷ್ಠಿತ ಔಷದ ಕಂಪನಿ ಸಿಪ್ಲಾ ಅಲ್ಲಿ ಕೆಲಸ ಮಾಡುತ್ತಿದ್ದು, ಬೆನಕ ಇವೆಂಟ್ಸ್ ಅಂಡ್ ಮ್ಯಾನೇಜ್ಮೆಂಟ್ ಎನ್ನುವ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಸ್ಥಾಪಿಸಿ ರಾಜ್ಯಮಟ್ಟದ ಕಾರ್ಯಕ್ರಮವನ್ನು ಸಂಘಟಿಸಿ ಹಾಗು ನಿರೂಪಿಸಿ ಪ್ರಸಿದ್ಧ ನಿರೂಪಕರೆನಿಸಿಕೊಂಡಿದ್ದಾರೆ. ಪ್ರಸ್ತುತ ಜೆಸಿ‌ಐ ಕುಂದಾಪುರ ಸಿಟಿ ಘಟಕದ ಕಾರ್ಯದರ್ಶಿಯಾಗಿ ಹಾಗು ಕುಂದಾಪುರ ಯುವ ಬಂಟರ ಸಂಘದ ದಶಮ ಸಂಭ್ರಮದ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!